ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಅವರು ಬೆಳಿಗ್ಗೆ ಸೌಹಾರ್ದ ಸೌರಭ ಕಟ್ಟಡದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಗೌರವಾಧ್ಯಕ್ಷ ನಾಗೇಶ್.ಕೆ, ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಪಟ್ಟಡ ಎ.ಪೂವಣ್ಣ ಹಾಗೂ ಮಂಗಳೂರಿನ ಕೆಐಒಸಿಎಲ್ ಲಿಮಿಟೆಡ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.