ಮಡಿಕೇರಿ ನಗರಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಬಿಜೆಪಿಯ ನಾಲ್ವರು ಸದಸ್ಯರು ಈ ಸಂದರ್ಭ ಅವಿರೋಧವಾಗಿ ಆಯ್ಕೆ ಆದರು. ತೆರಿಗೆ ನಿರ್ಧಾರ ಮತ್ತು ಹಣಕಾಸು ಸಮಿತಿಗೆ ಅರುಣ್ ಶೆಟ್ಟಿ, ಸಾರ್ವಜನಿಕ ಅರೋಗ್ಯ ಮತ್ತು ಶಿಕ್ಷಣ ಸಮಿತಿಗೆ ಸತೀಶ್, ಪಟ್ಟಣ ಯೋಜನೆ, ನಗರ ಅಭಿವೃದ್ಧಿ ಸಮಿತಿಗೆ ಅಪ್ಪಣ್ಣ ಹಾಗೂ ಲೆಕ್ಕಪತ್ರ ಸಮಿತಿಗೆ ಶಾರದ ನಾಗರಾಜ್ ಆಯ್ಕೆ ಮಾಡಲಾಯಿತು. ಮಡಿಕೇರಿ ನಗರ ಸಭೆ ಅಧ್ಯಕ್ಷೆ ಕಲಾವತಿ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.