ಹಾಲು ಉತ್ಪಾದಕರ ಸಂಘಕ್ಕೆ ನಿರ್ದೇಶಕರ ಆಯ್ಕೆ

ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಆದ ನಿರ್ದೇಶಕರು. ಮಮತಾ, ಪವಿತ್ರ, ರತ್ನ, ಜ್ಯೋತಿ, ಕಮಲ ಮತ್ತಿತರರು ಇದ್ದಾರೆ.
ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಆದ ನಿರ್ದೇಶಕರು. ಮಮತಾ, ಪವಿತ್ರ, ರತ್ನ, ಜ್ಯೋತಿ, ಕಮಲ ಮತ್ತಿತರರು ಇದ್ದಾರೆ.
Published on
ಕುಶಾಲನಗರ:
ಕುಶಾಲನಗರ ತಾಲೂಕು ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ ಭಾನುವಾರ ನಡೆಯಿತು. 9 ನಿರ್ದೇಶಕ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. 40 ಮತದಾರರ ಪೈಕಿ ಎಲ್ಲರೂ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು.
ಸಾಮಾನ್ಯ ಕ್ಷೇತ್ರದಿಂದ ಮಮತಾ, ಪವಿತ್ರ, ರತ್ನ, ಜ್ಯೋತಿ, ಕಮಲ, ರತ್ನ, ರೇಣುಕಾ, ಮಂದಾಕಿನಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಲತಾ ಅಯ್ಕೆ ಆಗಿದ್ದಾರೆ. ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರದಲ್ಲಿ ಬಿ.ಸಿ.ಎಂ.ಎ. ಕ್ಷೇತ್ರದಿಂದ ಜಯಶ್ರೀ ಮತ್ತು ಎಸ್.ಟಿ. ವಿಭಾಗದಿಂದ ಲಕ್ಷ್ಮಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯದರ್ಶಿ ಸುಮಾ ಕಾರ್ಯ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net