ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ

ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.
ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.
Published on
ವಿರಾಜಪೇಟೆ: ಪ್ರತಿಭೆ ಯಾರ ಸ್ವತ್ತು ಅಲ್ಲ. ಪ್ರತಿಯೊಬ್ಬರಿಗೂ ದೇವರು ನೀಡಿರುವ ವರ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಡೊಮೆನಿಕ್ ಜೇಮ್ಸ್ ಅಭಿಪ್ರಾಯಪಟ್ಟರು.
ಪಟ್ಟಣದ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮಲ್ಲಿರುವ ಪ್ರತಿಭೆಗಳು ಮಹತ್ತರ ಮತ್ತು ಅಮೂಲ್ಯವಾದದ್ದು. ಮಕ್ಕಳ ಪ್ರತಿಭೆಯನ್ನು ಪಾಲಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಅದನ್ನು ಸಮರ್ಥವಾಗಿ ಬಳಸಿಕೊಂಡು ಗುರಿ ಮುಟ್ಟಬೇಕು ಎಂದು ಸಲಹೆ ನೀಡಿದರು.
ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಶಾಲಾ, ಕಾಲೇಜುಗಳೆಂದರೆ ಪಠ್ಯಪುಸ್ತಕಗಳ ಅಧ್ಯಯನ ಮಾತ್ರವಲ್ಲ. ವಿದ್ಯಾರ್ಥಿಯ ಸರ್ವತ್ತೋಮುಖ ಬೆಳವಣಿಗೆ ಕಾರಣವಾಗಬೇಕು. ನಿರಂತರ ಪ್ರಯತ್ನದಿಂದ ಜೀವನದಲ್ಲಿ ಗುರಿ ಮುಟ್ಟಬಹುದು ಎಂದರು.
ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಮಾತನಾಡಿ, ಬದುಕಿನಲ್ಲಿ ಅಸಾಧ್ಯ ಎಂಬುದಿಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ಬಗೆಯ ಪ್ರತಿಭೆ ಅಡಗಿದೆ. ಪ್ರತಿಭೆಯನ್ನು ಗುರುತಿಸುವುದರ ಜತೆಗೆ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಕಾಲೇಜಿನ ಉಪನ್ಯಾಸಕ ಡಾ.ಹೇಮಂತ್ ಕುಮಾರ್, ಕ್ರಿಸ್ಟಿನಾ, ವಿವೇಕ್, ಕೃಷ್ಣರಾಜ್, ಜಹೀರ್, ಜೋಮನ್, ರಶ್ಮಿನ್, ಉಪನ್ಯಾಸಕರು, ಕಾಲೇಜಿನ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಯಾಗ್ ರಹಿತ ದಿನದ ಅಂಗವಾಗಿ ನಡೆದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೈವಿಧ್ಯಮಯ ಮತ್ತು ಆಕರ್ಷಕವಾದ ಕಾರ್ಯಕ್ರಮಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿ ಗಮನಸೆಳೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net