ಮಡಿಕೇರಿ: ಯಕ್ಷಗಾನ, ಡೊಳ್ಳುಕುಣಿತ, ಪೂಜಾಕುಣಿತ, ಜಾನಪದ ಗಾಯನ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಕಲೆಗಳು ನಾಡನ್ನು ಪ್ರತಿಬಿಂಭಿಸುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸುವಂತಾಗಬೇಕು. ಜೊತೆಗೆ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ರಮಾದೇವಿ ಕಳಗಿ ತಿಳಿಸಿದರು.