ಎಂಜಿನಿಯರಿ0ಗ್ ಕಾಲೇಜು ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನ

ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗಣ್ಯರು. ಹೆಚ್.ವಿ. ಶಿವಪ್ಪ, ಡಾ. ಸೀನಪ್ಪ, ಡಾ. ರಮೇಶ್ ನಾಗರಾಜ್,ಕೆ.ಐ. ಪರಿಶಿವಮೂರ್ತಿ ಮತ್ತಿತರರು ಇದ್ದರು.
ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಗಣ್ಯರು. ಹೆಚ್.ವಿ. ಶಿವಪ್ಪ, ಡಾ. ಸೀನಪ್ಪ, ಡಾ. ರಮೇಶ್ ನಾಗರಾಜ್,ಕೆ.ಐ. ಪರಿಶಿವಮೂರ್ತಿ ಮತ್ತಿತರರು ಇದ್ದರು.
Published on
ಕುಶಾಲನಗರ:
ಕುಶಾಲನಗರದಲ್ಲಿ ಇರುವ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಕೊಡಗಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಹೇಳಿದರು. ಸೋಮವಾರ ನಡೆದ ಕುಶಾಲನಗರ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಖಾಸಗಿ ಕಾಲೇಜುಗಳಿಗೆ ಸಮಾನವಾಗಿ ಅಥವಾ ಅದಕ್ಕಿಂತ ಉತ್ತಮವಾದ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತಿದೆ. ವಿಶೇಷವಾಗಿ ಕಾಲೇಜಿನಲ್ಲಿ ಹೆಣ್ಣುಮಕ್ಕಳ ಹೆಚ್ಚಿನ ಭಾಗವಹಿಸುವಿಕೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಚಾರ್ಯ ಹೆಚ್.ವಿ. ಶಿವಪ್ಪ ಮಾತನಾಡಿ ಅಭಿವೃದ್ಧಿಯ ಹಾದಿಯಲ್ಲಿ ಕಾಲೇಜು ವೇಗವಾಗಿ ಸಾಗುತ್ತಿದೆ. ಕಾಲೇಜಿನಲ್ಲಿ 18 ಮಂದಿ ಪಿಎಚ್.ಡಿ ಪದವೀಧರ ಪ್ರಾಧ್ಯಾಪಕರು ಕಾರ್ಯನಿರ್ವಹಿಸುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ದೊಡ್ಡ ಉಪಯೋಗ ಆಗುತ್ತಿದೆ. ಎಲ್ಲಾ ವಿಭಾಗಗಳಲ್ಲಿಯೂ ಅಂತಿಮ ವರ್ಷದ ವಿದ್ಯಾರ್ಥಿಗಳು ಶೇ. 100ರಷ್ಟು ಫಲಿತಾಂಶ ಸಾಧಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ವಿಶೇಷವಾಗಿ ಸಿವಿಲ್ ವಿಭಾಗ ದ್ವಿತೀಯ ರ‍್ಯಾಂಕ್ ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಕರ್ನಾಟಕ ಸರ್ಕಾರದ ಐಟಿ-ಬಿಟಿ ಇಲಾಖೆಯಿಂದ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಇನೋವೇಶನ್ ಲ್ಯಾಬ್ ಸ್ಥಾಪನೆಗೆ 1.25 ಕೋಟಿ ರೂ. ಅನುದಾನ ಮಂಜೂರಾಗಿರುವುದು ಕಾಲೇಜಿನ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲಾಗಿದೆ ಎಂದರು.
ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಸೀನಪ್ಪ ಮಾತನಾಡಿ ಇಂದಿನ ಯುಗದಲ್ಲಿ ತಾಂತ್ರಿಕ ಶಿಕ್ಷಣದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಉದ್ಯೋಗಾನ್ವೇಷಕರಿಗಿಂತ ಉದ್ಯಮಿಗಳಾಗಬೇಕು ಎಂದು ಹೇಳಿದರು.
ಕ್ರೀಡಾ ವಿಭಾಗದ ಮುಖ್ಯಸ್ಥ ಡಾ. ರಮೇಶ್ ನಾಗರಾಜ್ ವಾರ್ಷಿಕ ಕ್ರೀಡಾ ವರದಿ ಮಂಡಿಸಿದರು. ಕಾಲೇಜಿನ ಪ್ರಾಚಾರ್ಯ ಕೆ.ಐ. ಪರಿಶಿವಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಚೇರಿ ಅಧೀಕ್ಷಕಿ ರೂಪ, ಇಸಿ ವಿಭಾUದ ಡಾ. ಅನಿಲ್ ಕುಮಾರ್, ಭೌತ ಶಾಸ್ತ್ರ ವಿಭಾಗದ ಹೇಮಲತಾ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ವರ್ಣಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net