ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕೊಡಗು ಶಾಖೆ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷಚೇತನರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ಇಲ್ಲಿನ ಬಾಲ ಭವನ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯೂ ಈ ತರಬೇತಿಯ ಉಪಯೋಗ ಪಡೆದು, ಜೀವನದಲ್ಲಿ ಆರ್ಥಿಕ ಸ್ವಾವಲಂಬಿಯಾಗಬೇಕೆAದರು.