ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದಿಂದ ಪರಿಸರ ದಿನ

ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Published on
ನಾಪೋಕ್ಲು: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಗಿಡ ನೆಡುವುದರೊಂದಿಗೆ ಶುಕ್ರವಾರ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಕಾರ್ಯಕ್ರಮದ ನೇತೃತ್ವ ವಹಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ಹೊಸೋಕ್ಲು ಲತಾ ಮೊಣ್ಣಪ್ಪ, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ, ಕೋಶಾಧಿಕಾರಿ ಕೊಡಪಾಲು ತೀರ್ಥ ಗಣಪತಿ, ಸಂಘಟನಾ ಕಾರ್ಯದರ್ಶಿ ಬೈಮನ ಜ್ಯೋತಿ ತಿಮ್ಮಯ್ಯ, ನಿವೃತ್ತ ಶಿಕ್ಷಕಿ ಪಾಣತಲೆ ತಾರಾಮಣಿ, ಬೈಮನ ಕಾಂತಿ ದಯಾನಂದ ಸೇರಿದಂತೆ ಒಕ್ಕೂಟದ ನಿರ್ದೇಶಕರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net