ಕೂಡ್ಲೂರುವಿನಲ್ಲಿ ಪರಿಸರ ದಿನಾಚರಣೆ

ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಅವರಣದಲ್ಲಿ ನಡೆದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿಠಲ ಎಸ್. ಸಾಲಿಯಾನ, ಟಿ.ಜಿ. ಪ್ರೇಮಕುಮಾರ್, ಗಿರೀಶ್, ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ರಮ್ಯ, ನಿರ್ಮಲ ಇತರರು ಇದ್ದರು.
ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಅವರಣದಲ್ಲಿ ನಡೆದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಿಠಲ ಎಸ್. ಸಾಲಿಯಾನ, ಟಿ.ಜಿ. ಪ್ರೇಮಕುಮಾರ್, ಗಿರೀಶ್, ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ರಮ್ಯ, ನಿರ್ಮಲ ಇತರರು ಇದ್ದರು.
Published on
ಕುಶಾಲನಗರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ಕುಶಾಲನಗರ ತಾಲೂಕು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ಎನ್ನೆಸ್ಸೆಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಾಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ೨೦೨೬ ಅಂಗವಾಗಿ ಸೋಮವಾರ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಪರಿಸರ ಕಾರ್ಯಕ್ರಮದಲ್ಲಿ ಗಿಡನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ ಎಸ್. ಸಾಲಿಯಾನ ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ ನೆಟ್ಟು ಬೆಳೆಸಿ ಅದನ್ನು ಪೋಷಿಸುವ ಮೂಲಕ ಪರಿಸರ ಕಾಪಾಡಬೇಕಿದೆ. ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ, ಮರಗಳನ್ನು ಬೆಳೆಸುವುದಷ್ಟೇ ಅಲ್ಲ. ನಿತ್ಯ ಜೀವನದಲ್ಲಿ ಅನುಸರಿಸಬೇಕಾದ ಹಲವಾರು ನಡವಳಿಕೆಗಳನ್ನು ಚಾಚೂ ತಪ್ಪದೆ ಪಾಲಿಸುವುದರಿಂದ ಪರಿಸರವನ್ನು ಉಳಿಸಬಹುದು. ಸುಸ್ಥಿರ ಸಮಾಜಕ್ಕೆ ಉತ್ತಮ ಪರಿಸರವೂ ಮುಖ್ಯ. ನಮ್ಮ ಪ್ರತಿ ಹೆಜ್ಜೆಯಲ್ಲೂ ನಾವು ಪರಿಸರ ಪ್ರಜ್ಞೆ ಪ್ರಚೋದಿತವಾಗಬೇಕು. ಪರಿಸರವನ್ನು ನಾಶ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಹಾನಿಯ ಪ್ರಮಾಣ ಮಿತಿಮೀರಿ ಭವಿಷ್ಯದಲ್ಲಿ ತೀವ್ರ ಗಂಡಾAತರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಇಂತಹ ಪರಿಸರ ಕಾರ್ಯಕ್ರಮಗಳು ಜನರಲ್ಲಿ ಪರಿಸರದ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲರಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿದರೆ ಉತ್ತಮ ಹಾಗೂ ಸ್ವಚ್ಛ ವಾತಾವರಣ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರೂ ಪರಿಸರ
ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿ ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್,
ಶಾಲೆಗಳಲ್ಲಿ ಹಸಿರು ಕಾರ್ಯಕ್ರಮದಡಿ ವಿದ್ಯಾರ್ಥಿಗೊಂದು ಗಿಡ - ಶಾಲೆಗೊಂದು ವನ ಎಂಬ ಕಲ್ಪನೆಯ ಆಧಾರದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಾಮೂಹಿಕವಾಗಿ ಗಿಡ ನಾಟಿ ಮಾಡಿ ಅದನ್ನು ಪೋಷಿಸಿ ಸಂರಕ್ಷಿಸಿದಾಗ ಉತ್ತಮ ಪರಿಸರ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಅಭಿವೃದ್ಧಿ ಹಿನ್ನೆಲೆಯಲ್ಲಿ ಪರಿಸರಕ್ಕೆ ನಾವು ಯಾವುದೇ ರೀತಿಯಲ್ಲಿ ಧಕ್ಕೆಯನ್ನುಂಟು ಮಾಡದೇ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ಕೂಡಿಗೆಯ ವಲಯದ ಒಕ್ಕೂಟದ ಅಧ್ಯಕ್ಷ ಕೆ.ಎಚ್. ಗಿರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ವಲಯ ಮೇಲ್ವಿಚಾರಕ
ಸುಧೀರ್ ನೆಕ್ರಾಜೆ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಯೋಜನೆಯ ಸೇವಾ ಪ್ರತಿನಿಧಿ ನಿರ್ಮಲ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಎನ್. ಸುಜಾತ, ಬಿ.ಎಸ್. ಅನ್ಸಿಲಾ ರೇಖಾ, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net