ಕಾರ್ಯಕ್ರಮದಲ್ಲಿ ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಹಾಗೂ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಪರಿಸರ ಸಂರಕ್ಷಣೆ, ಅರಣ್ಯಗಳ ಮಹತ್ವ ಮತ್ತು ಹಸಿರು ಪರಿಸರ ನಿರ್ಮಾಣದ ಅಗತ್ಯತೆ ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆಯ ಕುರಿತು ಮಾಹಿತಿ ನೀಡಲಾಯಿತು. ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸುವುದು ಹಾಗೂ ಪ್ರಕೃತಿ ಸಂಪನ್ಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.