ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ಆಶ್ರಯದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕಿರಣ್ ಜಿ.ಗೌರಯ್ಯ, ವಿಠ್ಠಲ್ ಸಾಲಿಯಾನ್, ಎಂ.ಎನ್.ಚಂದ್ರಮೋಹನ್, ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ಆಶ್ರಯದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಕಿರಣ್ ಜಿ.ಗೌರಯ್ಯ, ವಿಠ್ಠಲ್ ಸಾಲಿಯಾನ್, ಎಂ.ಎನ್.ಚಂದ್ರಮೋಹನ್, ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
Published on
ಕುಶಾಲನಗರ: ನದಿ, ಪರಿಸರ ಸಂರಕ್ಷಣೆ ಬಗ್ಗೆ ಗಮನಹರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಸೀಲ್ದಾರ್ ಕಿರಣ್ ಜಿ.ಗೌರಯ್ಯ ಹೇಳಿದರು.
ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಮತ್ತು ನಮಾಮಿ ಕಾವೇರಿ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 186ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನದಿ, ಕೆರೆ ತಟಗಳಲ್ಲಿ ಯಾವುದೇ ಶಾಶ್ವತ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಸರ್ಕಾರದ ನಿಯಮ ಪಾಲಿಸಬೇಕು ಎಂದ ಅವರು, ಕಳೆದ ಹಲವು ವರ್ಷಗಳಿಂದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಮಾತನಾಡಿ, ಯೋಜನೆಯ ಸದಸ್ಯರು, ಕಾರ್ಯಕರ್ತರು ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನದಲ್ಲಿ ಕೆಲವು ವರ್ಷಗಳಿಂದ ಪಾಲ್ಗೊಳ್ಳುತ್ತಿದ್ದು, ಸ್ವಚ್ಛ ಕಾವೇರಿಯ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಲಿದೆ ಎಂದರು.
ಅರ್ಚಕ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ, ಅಷ್ಟೋತ್ತರ ನಂತರ ಕಾವೇರಿಗೆ ಆರತಿ ಬೆಳಗಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್.ಚಂದ್ರ ಮೋಹನ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಉಪಾಧ್ಯಕ್ಷ ಡಿ.ಆರ್.ಸೋಮಶೇಖರ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಸೇವಾ ಪ್ರತಿನಿಧಿ ಜಯಲಕ್ಷ್ಮೀ, ನಿರ್ಮಲಾ, ಕಾರ್ಯಕ್ರಮ ಆಯೋಜಕರಾದ ರವೀಂದ್ರ ಪ್ರಸಾದ್, ಬಬಿಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಎಸ್‌ಎಲ್ಎನ್ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪನ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net