ಕರ್ನಾಟಕ ಅರಣ್ಯ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಅಧಿನಿಯಮ ಕುರಿತು ಮಡಿಕೇರಿ ಸಿಐಡಿ ಅರಣ್ಯ ಸಂಚಾರಿದಳ ವತಿಯಿಂದ ಸಮೀಪದ ಆಲೂರು-ಸಿದ್ದಾಪುರ ಮುರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಅರಣ್ಯ, ವನ್ಯಜೀವಿ ಸೇರಿದಂತೆ ಸಕಲ ಜೀವರಾಶಿಗಳು ಪರಿಸರದ ಸಂಪನ್ಮೂಲಗಳಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರೂ ಪರಿಸರ, ಅರಣ್ಯ, ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಹೊಂದಬೇಕಾಗಿದೆ ಎಂದರು.