ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಆಲೂರು-ಸಿದ್ದಾಪುರ ಮುರಾರ್ಜಿ ಶಾಲೆಯಲ್ಲಿ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಶಿವಶಂಕರ್ ಮಾತನಾಡಿದರು. ಪ್ರಕಾಶ್ ಇತರರಿದ್ದರು.
ಆಲೂರು-ಸಿದ್ದಾಪುರ ಮುರಾರ್ಜಿ ಶಾಲೆಯಲ್ಲಿ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಶಿವಶಂಕರ್ ಮಾತನಾಡಿದರು. ಪ್ರಕಾಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಡಿಕೇರಿ ಅರಣ್ಯ ಸಂಚಾರದಳದ ಪಿಎಸ್‌ಐ ಶಿವಶಂಕರ್ ಹೇಳಿಕೆ
ಶನಿವಾರಸಂತೆ : ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಮಡಿಕೇರಿ ಸಿಐಡಿ ಅರಣ್ಯ ಸಂಚಾರದಳದ ಪಿಎಸ್‌ಐ ಶಿವಶಂಕರ್ ಹೇಳಿದರು.
ಕರ್ನಾಟಕ ಅರಣ್ಯ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಅಧಿನಿಯಮ ಕುರಿತು ಮಡಿಕೇರಿ ಸಿಐಡಿ ಅರಣ್ಯ ಸಂಚಾರಿದಳ ವತಿಯಿಂದ ಸಮೀಪದ ಆಲೂರು-ಸಿದ್ದಾಪುರ ಮುರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಅರಣ್ಯ, ವನ್ಯಜೀವಿ ಸೇರಿದಂತೆ ಸಕಲ ಜೀವರಾಶಿಗಳು ಪರಿಸರದ ಸಂಪನ್ಮೂಲಗಳಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರೂ ಪರಿಸರ, ಅರಣ್ಯ, ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಹೊಂದಬೇಕಾಗಿದೆ ಎಂದರು.
ಅರಣ್ಯ ಸಂರಕ್ಷಣೆ ಮಾಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಜಾಗೃತಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಮುರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಪ್ರಕಾಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net