ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸಬೇಕು

ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಜಾಗೃತಿ ಜಾಥಾ ನಡೆಯಿತು. ಬಾರಿಕೆ ದಿನೇಶ್ ಕುಮಾರ್, ಆರ್. ಐಶ್ವರ್ಯ, ಬೇಬಿ ಮ್ಯಾಥ್ಯೂ, ಸತೀಶ್, ಶಾಲಾ ಮಕ್ಕಳು ಮತ್ತಿತರರು ಇದ್ದರು.
ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಜಾಗೃತಿ ಜಾಥಾ ನಡೆಯಿತು. ಬಾರಿಕೆ ದಿನೇಶ್ ಕುಮಾರ್, ಆರ್. ಐಶ್ವರ್ಯ, ಬೇಬಿ ಮ್ಯಾಥ್ಯೂ, ಸತೀಶ್, ಶಾಲಾ ಮಕ್ಕಳು ಮತ್ತಿತರರು ಇದ್ದರು.
Published on
ಮಡಿಕೇರಿ:
ವಾಹನ ಚಲಾಯಿಸುವ ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡುವುದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಹೇಳಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ, ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬುಧವಾರ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ ಜಾಗೃತಿ ಮೂಡಿಸಿದ ಅವರು ವಾಹನ ಸಂಚಾರ ಸಂಬAಧಿಸಿದAತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜತೆಗೆ ವಾಹನದ ವಿಮೆ ಇರಬೇಕು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು ಹೆಚ್ಚಾಗಿದೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ. ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹಾಗೆಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗುತ್ತದೆ. ವಾಹನ ಚಲಾಯಿಸುವಾಗ ಕುಟುಂಬದವರ ನೆನಪು ಸದಾ ಇರಬೇಕು. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ರಾಷ್ಟçದಲ್ಲಿ ವಾಹನ ಅಪಘಾತದಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶಿಸ್ತುಬದ್ಧವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ರಸ್ತೆ ಸುರಕ್ಷತೆ ಸಂಬAಧಿಸಿದAತೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ, ವಾಹನ ಚಾಲನಾ ತರಬೇತಿ ಶಾಲೆಗಳ ಸಂಘದ ಅಧ್ಯಕ್ಷ ಗಿಲ್ಬರ್ಟ್ ಲೋಬೋ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕ ಸಲೀಮ, ಮೋಹನ್ ಕುಮಾರ್, ಮೋಟಾರು ವಾಹನ ನಿರೀಕ್ಷಕ ಮೋಹನ್ ಕುಮಾರ್, ಪ್ರದೀಪ್, ನಿವೃತ್ತ ಪ್ರಾದೇಶಿಕ ಅಧಿಕಾರಿ ಪಾಷ, ರೀಟಾ ಇತರರು ಇದ್ದರು.
ಇದಕ್ಕೂ ಮೊದಲು ರಸ್ತೆ ಸುರಕ್ಷತೆ ಮಾಸಾಚರಣೆ ಪ್ರಯುಕ್ತ ನಗರದ ಹೊಸ ಖಾಸಗಿ ಬಸ್ ನಿಲ್ದಾಣದಿಂದ ಮೈತ್ರಿ ಸಭಾಂಗಣದವರೆಗೆ ಜಾಥಾ ನಡೆಯಿತು. ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಖಾಸಗಿ ಬಸ್ ಹಾಗೂ ಆಟೋ ಚಾಲಕರ ಸಂಘ ಹೀಗೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ರಸ್ತೆ ಸುರಕ್ಷತೆ ಸಂಬAಧಿಸಿದAತೆ ಪ್ಲೇ ಕಾರ್ಡ್ ಮೂಲಕ ಜಾಗೃತಿ ಮೂಡಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net