ವಿರಾಜಪೇಟೆಯಲ್ಲಿ ಮಾಜಿ ಸೈನಿಕರಿಗೆ ಸನ್ಮಾನ

 ವಿರಾಜಪೇಟೆ ತಾಲೂಕು ಮೈದಾನದಲ್ಲಿ ಸ್ವಾತಂತ್ರೋತ್ಸವ ಆಯೋಜಿಸಲಾಗಿತ್ತು. ಸುಜಾಕುಶಾಲಪ್ಪ, ಪ್ರವೀಣ್, ಮಹೇಶ್ ಕುಮಾರ್, ರಾಜೇಶ್, ಹರೀಶ್, ನಾಸೀರ್ ಇದ್ದರು.
ವಿರಾಜಪೇಟೆ ತಾಲೂಕು ಮೈದಾನದಲ್ಲಿ ಸ್ವಾತಂತ್ರೋತ್ಸವ ಆಯೋಜಿಸಲಾಗಿತ್ತು. ಸುಜಾಕುಶಾಲಪ್ಪ, ಪ್ರವೀಣ್, ಮಹೇಶ್ ಕುಮಾರ್, ರಾಜೇಶ್, ಹರೀಶ್, ನಾಸೀರ್ ಇದ್ದರು.
Published on

ಪಟ್ಟಣದ ತಾಲೂಕು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ವಿಜೃಂಭ್ರಣೆಯಿಂದ ನಡೆಯಿತು. ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಸಂವಿಧಾನ ವಿಶೇಷವಾಗಿದೆ. ಇಂದು ದೇಶ ಭವಿಷ್ಯದ ದೃಷ್ಟಿಯಿಂದ ಸೂಕ್ತ ಯೋಜನೆಗಳೊಂದಿಗೆ ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತಿದೆ ಎಂದರು.

ಸಮಾರಂಭದಲ್ಲಿ ಮಾಜಿ ಸೈನಿಕರಾದ ಐಚಂಡ ಕೆ.ಮುತ್ತಣ್ಣ, ಕುಟ್ಟಂಡ ಹ್ಯಾರಿ ಅಪ್ಪಯ್ಯ, ಪಂದಿಕಂಡ ಬೆಳ್ಯಪ್ಪ, ಅಜ್ಜಿಯಂಡ ಸುಭಾಶ್ ಚಂದ್ರ, ಅಮ್ಮುಣಿಚಂಡ ರವಿ ಉತ್ತಪ್ಪ ಹಾಗೂ ಕ್ರೀಡಾಪಟು ಸಂಜನಾ ಅವರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ಪ್ರವೀಣ್ ಕುಮಾರ್, ಡಿವೈಎಸ್ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಡಿ.ಪಿ.ರಾಜೇಶ್, ಗ್ರೇಡ್ -2 ತಹಸೀಲ್ದಾರ್ ಪ್ರದೀಪ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಜಾನ್ಸನ್, ಉಪಾಧ್ಯಕ್ಷ ನಾಸೀರ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಇತರರು ಇದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ತಹಸೀಲ್ದಾರ್ ಪ್ರವೀಣ್ ಕುಮಾರ್ ಧ್ವಜಾರೋಹಣ ನೇರವೇರಿಸಿದರು. ಬಳಿಕ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ಲತಾ ನೇತೃತ್ವದಲ್ಲಿ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net