

ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ ಕೊಡಲಾಗುತ್ತಿದೆ. ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿಸುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಅಂಥ ಶಾಲೆಗೆ 1 ಲಕ್ಷ ರೂ. ಕೊಡುವ ಸರ್ಕಾರಿ ಯೋಜನೆ ಇದೆ. ಇದರಲ್ಲಿ 10 ಸಾವಿರ ರೂ. ದೈಹಿಕ ಶಿಕ್ಷಣ ಶಿಕ್ಷಕರಿಗೆ ನೀಡಿದರೆ ಉಳಿದ 90 ಸಾವಿರ ರೂ.ಗಳನ್ನು ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ಖರೀದಿಸುವ ಸಲುವಾಗಿ ಸಂಬAಧಿಸಿದ ಶಾಲೆಯ ಎಸ್‌ಡಿಎಂಸಿಗೆ ಕೊಡಲಾಗುವುದು. 2024-25ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪರಿಶಿಷ್ಟ ಜಾತಿ ಉಪ ಯೋಜನೆ ಅಡಿಯಲ್ಲಿ ರಾಜ್ಯದ 159 ಕ್ರೆöÊಸ್ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಸರಬರಾಜು ಮಾಡಲಾಗಿದೆ.