ನಿವೃತ್ತ ಅಧಿಕಾರಿ ಹೊನ್ನೇಗೌಡರಿಗೆ ಬೀಳ್ಕೊಡುಗೆ

ನಗರದ ಮೈತ್ರಿ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊನ್ನೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಆನಂದ್ ಪ್ರಕಾಶ್ ಮೀನಾ, ಶೇಖರ್, ಅಪೂರ್ವಚಂದ್ರ ಇತರರಿದ್ದರು.
ನಗರದ ಮೈತ್ರಿ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊನ್ನೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಆನಂದ್ ಪ್ರಕಾಶ್ ಮೀನಾ, ಶೇಖರ್, ಅಪೂರ್ವಚಂದ್ರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಿವೃತ್ತ ಅಧಿಕಾರಿ ಹೊನ್ನೇಗೌಡರಿಗೆ ಬೀಳ್ಕೊಡುಗೆ
ಮಡಿಕೇರಿ: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯ ಅಧಿಕಾರಿಯಾಗಿ ಜಿಲ್ಲೆಯಲ್ಲಿ ಸುಮಾರು ೩೩ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಎಸ್.ಹೊನ್ನೇಗೌಡ ಅವರಿಗೆ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ನಗರದ ಮೈತ್ರಿ ಹಾಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಹೊನ್ನೇಗೌಡ ಅವರಿಗೆ ವಿಶೇಷ ಉಡುಗೊರೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರು, ಜಿಲ್ಲೆಯಲ್ಲಿ ಉತ್ತಮ ಅನುಭವ ಆಗಿದೆ. ಜೊತೆಗೆ ಆತ್ಮತೃಪ್ತಿಯೂ ಇದೆ ಎಂದು ತಿಳಿಸಿದ ಅವರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆತ್ಮ ತೃಪ್ತಿಯಿಂದ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆದರೆ ಒತ್ತಡ ಮಾಡಿಕೊಂಡು ಕಾರ್ಯ ನಿರ್ವಹಿಸಬಾರದು ಎಂದು ಅವರು ಸಲಹೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು, ಹೊನ್ನೇಗೌಡ ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ತಮ್ಮ ಸೇವಾ ಅವಧಿಯಲ್ಲಿ ವಾಲ್ಮೀಕಿ ವಸತಿ ಶಾಲೆ, ಹಾಡಿಗಳಿಗೆ ಭೇಟಿ ನೀಡಿ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಅದರ ಮನ್ನಣೆ ಹೊನ್ನೇಗೌಡರಿಗೆ ಸಲ್ಲುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್ ಮಾತನಾಡಿ, ಹೊನ್ನೇಗೌಡರು ವ್ಯಕ್ತಿಯಲ್ಲ, ಅವರು ಒಂದು ಶಕ್ತಿಯಾಗಿದ್ದಾರೆ. ತಮ್ಮ ೩೩ ವರ್ಷಗಳ ಕಾಲ ಸಾರ್ಥಕವಾದ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಅವಧಿಯು ಸುವರ್ಣಯುಗ ಎಂದು ಬಣ್ಣಿಸಿದರು.
ಮದ್ದೂರು ಹೆಚ್.ಕೆ.ವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಪೂರ್ವಚಂದ್ರ, ನಿವೃತ್ತ ಉಪನ್ಯಾಸಕ ಮಹೇಶ್ ಕುಮಾರ್, ಕೋತೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್, ಸೋಮನಹಳ್ಳಿ ಎಸ್‌ಸಿಎಂಎಂ ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕರಾದ ವಿಜಯ್ ಶೇಖರ್, ಜಸ್ಮಿತಾ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ನ್ಯೂಕ್ಲಿಯರ್ ಮೆಡಿಸಿನ್ ರೇಡಿಯಾಲಜಿಸ್ಟ್ ಡಾ.ಸಿದ್ಧಲಿಂಗದೇವರು, ಹುಣಸೂರು ತಾಲೂಕು ಪರಿಶಿಷ್ಟ ಕಲ್ಯಾಣಾಧಿಕಾರಿ ಗಂಗಾಧರ್, ಎಸ್.ಹೊನ್ನೇಗೌಡ ಅವರ ತಂದೆ ಶ್ರೀನಿವಾಸಯ್ಯ, ತಾಯಿ ಪುಟ್ಟಚನ್ನಮ್ಮ, ಪತ್ನಿ ಶಶಿಕಲಾ ಹೊನ್ನೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಹೊನ್ನೇಗೌಡರ ಪತ್ನಿ ಶಶಿಕಲಾ ಹೊನ್ನೇಗೌಡರು ರಚಿಸಿ ಜ್ಞಾನಧಾರೆಗಳು ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net