ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಗೆ ಪ್ರಿಯವಾಗಿದ್ದ ಹೇಳಿಕೆಗಳನ್ನು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ವಾಚಿಸಿದರು. ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಗುರುದತ್, ನಿಯತಾ ದೇವಯ್ಯ, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ, ನಿವೃತ್ತ ಕರ್ನಲ್ ಬಿ.ಜಿ.ವಿ.ಕುಮಾರ್, ಕರ್ನಲ್ ಕಾವೇರಪ್ಪ ಪ್ರೇಮ್‌ನಾಥ್, ಬಾಬು ಸೋಮಯ್ಯ, ಹಾಜರಿದ್ದರು. ಸೇರಿದಂತೆ ಮಾಜಿ ಸೈನಿಕರು, ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು, ವಿದ್ಯಾರ್ಥಿ, ಶಿಕ್ಷಕರು, ಕೂಡಿಗೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.