ಸರ್ಕಾರದ ಕಡು ಜನವಿರೋಧಿ ಮತ್ತು ನಿರಂಕುಶ ನಡೆಯ ವಿರುದ್ಧ ತೀವ್ರ ಹೋರಾಟ

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಎಐಡಿಎಸ್‌ಒ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಬೃಹತ್ ಜನಸಮಾವೇಶದ ಪೋಸ್ಟರ್ ಚಿಕ್ಕತ್ತೂರು ಗ್ರಾಮದಲ್ಲಿ ಬಿಡುಗಡೆ ಮಾಡಲಾಯಿತು. ಸುಭಾಷ್ ಬೆಟ್ಟದಕೊಪ್ಪ, ಸ್ವಾತಿ, ಹರೀಶ್, ಪೂರ್ಣಿಮಾ ಮತ್ತಿತರರು ಇದ್ದರು.
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಎಐಡಿಎಸ್‌ಒ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಬೃಹತ್ ಜನಸಮಾವೇಶದ ಪೋಸ್ಟರ್ ಚಿಕ್ಕತ್ತೂರು ಗ್ರಾಮದಲ್ಲಿ ಬಿಡುಗಡೆ ಮಾಡಲಾಯಿತು. ಸುಭಾಷ್ ಬೆಟ್ಟದಕೊಪ್ಪ, ಸ್ವಾತಿ, ಹರೀಶ್, ಪೂರ್ಣಿಮಾ ಮತ್ತಿತರರು ಇದ್ದರು.
Published on
ಮಡಿಕೇರಿ:
ಬಡಮಕ್ಕಳನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರ ತಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ನಾಡಿನ ಹೆಸರಾಂತ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಪ್ರೇಮಿಗಳು ಖಂಡಿಸಿದ್ದಾರೆ ಎಂದು ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಹೇಳಿದರು. ಚಿಕ್ಕತ್ತೂರು ಗ್ರಾಮದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯಮಟ್ಟದ ಬೃಹತ್ ಜನಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ಧ ಕಳೆದ 4 ತಿಂಗಳಿನಿAದ ಜನ ಹೋರಾಟ ನಡೆದಿದೆ. ಎಐಡಿಎಸ್‌ಒ ನೇತೃತ್ವದಲ್ಲಿ ರಾಜ್ಯದಾದ್ಯಂತ ಹಳ್ಳಿ-ಹಳ್ಳಿಗಳಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಗಳನ್ನು ರಚಿಸಿಕೊಂಡು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಒಕ್ಕೊರಲಿನಿಂದ ಧ್ವನಿಯೆತ್ತಿದ್ದಾರೆ. ನಾಡಿನ ಜನತೆಯ ತೀವ್ರ ವಿರೋಧದ ನಡುವೆಯೂ ಸರ್ಕಾರ ಶಾಲೆಗಳನ್ನು ಮುಚ್ಚುವ ಕೆಲಸವನ್ನು ಮುಂದುವರಿಸಿದೆ. ಸರ್ಕಾರ ಈಗಾಗಲೇ ಯಾವ-ಯಾವ ಶಾಲೆಗಳನ್ನು ವಿಲೀನಗೊಳಿಸಬೇಕೆಂದು ಮ್ಯಾಪಿಂಗ್ ನಡೆಸಿದೆ. ಅಧಿಕಾರಿಗಳಿಂದ ಮ್ಯಾಗ್ನೆಟ್ ಶಾಲೆಯ ಸಮೀಕ್ಷೆ ಮಾಡಿಸಲಾಗುತ್ತಿದೆ. ವಿಲೀನಗೊಳ್ಳುವ ಶಾಲೆಗಳ ಮುಖ್ಯಶಿಕ್ಷಕರಿಗೆ ಮೌಖಿಕವಾಗಿ ಆದೇಶ ನೀಡಲಾಗಿದೆ. ಏ. 8ಮತ್ತು 9 ರಂದು ನಡೆಯಲಿರುವ ಪೋಷಕರ ಸಭೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳನ್ನು ಕೆಪಿಎಸ್ ಶಾಲೆಗೆ ಕಳುಹಿಸುವಂತೆ ಒತ್ತಾಯಿಸಲು ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಈ ಯೋಜನೆಯನ್ನು ಶತಾಯಗತಾಯ ಅನುಷ್ಠಾನಗೊಳಿಸಲು ಏಪ್ರಿಲ್ ಒಂದರAದು ಜಿಲ್ಲೆಯ ಡಿಡಿಪಿಐ ಹಾಗೂ ಬಿಇಓಗಳ ಸಭೆಯನ್ನು ನಡೆಸಿ ಶಾಲೆ ಮುಚ್ಚಲು ಕುತಂತ್ರ ನಡೆಸಿದೆ ಎಂದರು.
ಎಐಡಿಎಸ್‌ಒ ಕೊಡಗು ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ ಸರ್ಕಾರದ ಈ ಕಡು ಜನವಿರೋಧಿ ಮತ್ತು ನಿರಂಕುಶ ನಡೆಯ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಜನ ಸಮಾವೇಶವನ್ನು ಏ. 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನÀಲ್ಲಿ ಆಯೋಜಿಸಲಾಗಿದೆ. ರಾಜ್ಯದ ಹಳ್ಳಿ-ಹಳ್ಳಿಗಳಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು 'ನಮ್ಮೂರ ಶಾಲೆ ಉಳಿಯಲಿ' ಎಂಬ ಘೋಷಗಳನ್ನು ಮೊಳಗಿಸುತ್ತ ಬೆಂಗಳೂರಿಗೆ ಬರಲು ತಯಾರಿ ನಡೆಸಿದ್ದಾರೆ ಎಂದು ಹೇಳಿದರು.
ಕೊಡಗು ಜಿಲ್ಲಾ ಮಟ್ಟದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷÀ ಹರೀಶ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 5 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆಯ್ಕೆ ಮಾಡಿ 235 ಶಾಲೆಗಳನ್ನು ಮುಚ್ಚಲಾಗುತ್ತಿದೆ. ನಮ್ಮೂರಿನ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ಕೊಡಗಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು,
ಎಐಡಿವೈಓ ಯುವಜನ ಸಂಘಟನೆಯ ಪೂರ್ಣಿಮಾ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷರುಗಳಾದ ಚಿಕ್ಕತ್ತೂರಿನ ಹರೀಶ್, ವಿಜಯನಗರದ ಹಾಗೂ ಸದಸ್ಯರಾದ ನಾಗೇಂದ್ರ, ರಂಜಿತ, ಜ್ಯೋತಿ ಈ ಸಂದದರ್ಭ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net