ಅಮ್ಮತ್ತಿಯಲ್ಲಿ ಫಿಫಾ ವಿಶ್ವಕಪ್ ಫುಟ್‌ಬಾಲ್ ರಂಗು

ಅಮ್ಮತ್ತಿಯ ಗುಡ್ ಶೆಫರ್ಡ್ ಪದವಿ ಪೂರ್ವ ಕಾಲೇಜುನಲ್ಲಿ ಫಿಫಾ ವಿಶ್ವಕಪ್ ಫುಟ್‌ಬಾಲ್ ಅಂಗವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.
ಅಮ್ಮತ್ತಿಯ ಗುಡ್ ಶೆಫರ್ಡ್ ಪದವಿ ಪೂರ್ವ ಕಾಲೇಜುನಲ್ಲಿ ಫಿಫಾ ವಿಶ್ವಕಪ್ ಫುಟ್‌ಬಾಲ್ ಅಂಗವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.
Published on
ಸಿದ್ದಾಪುರ: ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಸಂಭ್ರಮ ಅಮ್ಮತ್ತಿ ಪಟ್ಟಣದಲ್ಲೂ ಜೋರಾಗಿದೆ. ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ವಿವಿಧ ದೇಶಗಳ ಫುಟ್ಬಾಲ್ ತಂಡಗಳ ಆಟಗಾರರ ದೊಡ್ಡ ದೊಡ್ಡ ಫ್ಲೆಕ್ಸ್‌ಗಳು, ಬಂಟಿಂಗ್ಸ್‌ಗಳು ಮತ್ತು ಧ್ವಜಗಳು ರಾರಾಜಿಸುತ್ತಿವೆ.
ಫುಟ್ಬಾಲ್ ಅಭಿಮಾನಿಗಳು ತಮ್ಮ ನೆಚ್ಚಿನ ತಂಡಗಳಾದ ಬ್ರೆಜಿಲ್, ಅರ್ಜೆಂಟೀನಾ, ಜರ್ಮನಿ, ಇಂಗ್ಲೆಂಡ್, ಫ್ರಾನ್ಸ್ ಸೇರಿದಂತೆ ವಿವಿಧ ದೇಶಗಳ ಪರ ಬೆಂಬಲ ವ್ಯಕ್ತಪಡಿಸುತ್ತಿದ್ದು ಪಟ್ಟಣದಲ್ಲಿ ಕ್ರೀಡಾ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯುವಕರು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ತಂಡಗಳ ಬಗ್ಗೆ ಅಭಿಮಾನ ಪ್ರದರ್ಶಿಸುತ್ತಿದ್ದಾರೆ.
ಅಮ್ಮತ್ತಿಯ ಗುಡ್ ಶೆಫರ್ಡ್ ಪದವಿ ಪೂರ್ವ ಕಾಲೇಜುನಲ್ಲಿ ಫಿಫಾ ವಿಶ್ವಕಪ್ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ದೇಶಗಳ ಜರ್ಸಿ, ಧ್ವಜ ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಫುಟ್ಬಾಲ್ ಮೇಲಿನ ಆಸಕ್ತಿ ಪ್ರದರ್ಶಿಸಿದರು. ವಿವಿಧ ತಂಡಗಳ ಸಾಧನೆ, ವಿಶ್ವಕಪ್ ಇತಿಹಾಸ ಹಾಗೂ ಪ್ರಸಿದ್ಧ ಆಟಗಾರರ ಕುರಿತು ಮಾಹಿತಿ ಹಂಚಿಕೊಂಡರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net