ಜಿ ರಾಮ್ ಜಿ ಯೋಜನೆ ವಿರುದ್ಧ ಹೋರಾಟ

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮೀಪ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ , ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ನೆಲ್ಲಿಹುದಿಕೇರಿ ಪಂಚಾಯಿತಿ ಮಾಜಿ ಅಧ್ಯಕ್ಷ ಹಖೀಂ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಗುಡ್ಡೆಹೊಸೂರು ಪಂಚಾಯಿತಿ ಮಾಜಿ ಅಧ್ಯಕ್ಷೆ ರುಕ್ಮಿಣಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಲ್ಲಿಕಾರ್ಜುನ, ನಂಗಾರು ಜಗ್ಗ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆಕ್ರೋಶ
  • ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕುಶಾಲನಗರ: ಜಿ ರಾಮ್ ಜಿ ಯೋಜನೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ ತಿಳಿಸಿದರು.
ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಹಿಂಭಾಗದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ನೊಂದವರು ಹಾಗೂ ದೀನ ದಲಿತರ ಕಲ್ಯಾಣ ಕೇವಲ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಜಿ ರಾಮ್ ಜಿ ಯೋಜನೆಯ ಹೆಸರು ಕೈ ಬಿಡುವ ತನಕ ನಿರಂತರ ಹೋರಾಟ ರೂಪಿಸಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಹಾಗೂ ಇತರ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋಧಿ ಯೋಜನೆಗಳ ವಿರುದ್ಧ ಬೀದಿಗಿಳಿದು ಹೋರಾಡಬೇಕು ಎಂದು ಕರೆ ನೀಡಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಚಂದ್ರಕಲಾ ಅವರು ಪಕ್ಷದ ಸಂಘಟನೆ ಬಗ್ಗೆ ಮಾತನಾಡಿದರು. ನೆಲ್ಲಿಹುದಿಕೇರಿ ಪಂಚಾಯಿತಿ ಮಾಜಿ ಅಧ್ಯಕ್ಷ ಹಖೀಂ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಗೋವಿಂದಪ್ಪ, ಗುಡ್ಡೆಹೊಸೂರು ಪಂಚಾಯಿತಿ ಮಾಜಿ ಅಧ್ಯಕ್ಷೆ ರುಕ್ಮಿಣಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮಲ್ಲಿಕಾರ್ಜುನ, ನಂಗಾರು ಜಗ್ಗ ಇತರರಿದ್ದರು.
21ಏಓ1
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net