ಆರ್ಥಿಕ ಸಾಕ್ಷರತೆಯ ಅರಿವು ಅಗತ್ಯ

ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಕೊಡಗು ಜಿಲ್ಲೆಯ ಲೀಡ್ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.  ಪಿ. ಎ. ಮೊಹಮ್ಮದ್ ನಬಿ,  ಎಚ್.ಪಿ.ಮಂಜುನಾಥ್, ಎನ್.ವೆಂಕಟನಾಯ್ಕ, ಡಿ. ಕವಿತಾ ಮತ್ತಿತರರಿದ್ದರು.

Published on
ಕುಶಾಲನಗರ: ದೇಶದಲ್ಲಿ ಬ್ಯಾಂಕ್ ಗ್ರಾಹಕರಲ್ಲಿ ಆರ್ಥಿಕ ಸಾಕ್ಷರತೆಯ ಅರಿವು ಇಲ್ಲದಿರುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿಲ್ಲ ಎಂದು ಲೀಡ್ ಬ್ಯಾಂಕಿನ ಸಂಪನ್ಮೂಲ ವ್ಯಕ್ತಿ ಪಿ.ಎ.ಮೊಹಮ್ಮದ್ ಹೇಳಿದರು.
ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಕೊಡಗು ಜಿಲ್ಲೆಯ ಲೀಡ್ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬ್ಯಾಂಕುಗಳು ಸರ್ಕಾರದ ನಿರ್ದೇಶನದೊಂದಿಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತವೆ. ಅವುಗಳ ಬಗ್ಗೆ ತಿಳಿದುಕೊಂಡರೆ ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕಬಹುದು ಎಂದರು.
ವಿದ್ಯಾವರ್ಧಕ ಸಂಘದ ನಿರ್ದೇಶಕ ಎಚ್.ಪಿ.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಆರ್ಥಿಕವಾಗಿ ಸಬಲರಾಗಬೇಕಾದರೆ ಇಂತಹ ಮಾಹಿತಿ ಹಾಗೂ ಯೋಜನೆಗಳನ್ನು ಪಡೆದು ಪ್ರಗತಿಪಥದಲ್ಲಿ ಸಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಬಸವರಾಜ ಶೆಟ್ಟಿ, ಶಿಕ್ಷಕರಾದ ಭೋಜೆಗೌಡ, ಸಿ.ಡಿ.ಲೋಕೇಶ್, ಎ.ಕೆ.ಅನಂತ, ಮನು ಬಸವರಾಜ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net