ಅಗ್ನಿಶಾಮಕ ಸೇವಾ ಸಪ್ತಾಹ ಆಚರಣೆ

ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶೇಷ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಅಗ್ನಿಶಾಮಕ ಠಾಣಾಧಿಕಾರಿ ಎನ್.ಎ. ರಂಜಿತ್ ಉದ್ಘಾಟಿಸಿದರು. ಕೆ.ಕೆ. ನಾಗರಾಜ ಶೆಟ್ಟಿ, ಕ್ಲಾರಾ ರೇಷ್ಮಾ, ಟಿ.ಎ. ಲಿಖಿತ, ಲತೇಶ್, ಎಂ.ಎನ್. ಚಂದ್ರಮೋಹನ್ ಇದ್ದರು.
ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶೇಷ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಅಗ್ನಿಶಾಮಕ ಠಾಣಾಧಿಕಾರಿ ಎನ್.ಎ. ರಂಜಿತ್ ಉದ್ಘಾಟಿಸಿದರು. ಕೆ.ಕೆ. ನಾಗರಾಜ ಶೆಟ್ಟಿ, ಕ್ಲಾರಾ ರೇಷ್ಮಾ, ಟಿ.ಎ. ಲಿಖಿತ, ಲತೇಶ್, ಎಂ.ಎನ್. ಚಂದ್ರಮೋಹನ್ ಇದ್ದರು.
Published on
ಕುಶಾಲನಗರ:
ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುಶಾಲನಗರ ಘಟಕ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಅಗ್ನಿಶಾಮಕ ಠಾಣಾಧಿಕಾರಿ ಎನ್.ಎ. ರಂಜಿತ್ ಚಾಲನೆ ನೀಡಿದರು.
ಅಗ್ನಿ ಅನಾಹುತದ ವಿಧಗಳು, ಅವುಗಳನ್ನು ನಿಯಂತ್ರಿಸುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಠಾಣೆಯ ಸಹಾಯಕ ಅಧಿಕಾರಿ ಲತೇಶ್ ಕುಮಾರ್ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಥಳೀಯ ಅಗ್ನಿಶಾಮಕ ಠಾಣೆ, ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆ ಸಂಗ್ರಹಿಸಿಟ್ಟುಕೊಳ್ಳುವುದು ಅವಶ್ಯಕ. ಅಪಾಯ ಸಂದರ್ಭಗಳಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕೂಡಲೇ ಮಾಹಿತಿ ನೀಡಬಹುದಾಗಿದೆ. ಅಗ್ನಿ ಅನಾಹುತಗಳನ್ನು ಎದುರಿಸುವ ವಿಧಾನಗಳ ಬಗ್ಗೆ ಕನಿಷ್ಠ ಅರಿವು ಹೊಂದುವ ಅಗತ್ಯವಿದೆ ಎಂದ ಅವರು ಸಾಮಾನ್ಯ ಅಗ್ನಿ ಅನಾಹುತ, ಅನಿಲಗಳಿಂದ ಉಂಟಾಗುವ ಅನಾಹುತ ಸೇರಿದಂತೆ ವಿವಿಧ ಬಗೆಯ ಅಗ್ನಿ ಅವಘಡಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ತುರ್ತು ಸೇವೆಗಳ ಬಗ್ಗೆ ಕೂಡ ಅರಿವು ಹೊಂದಬೇಕಿದೆ. ಇಂತಹ ಜಾಗೃತಿ ಶಿಬಿರಗಳಲ್ಲಿ ಪಾಲ್ಗೊಂಡು ಜ್ಞಾನವಂತರಾಗಬೇಕಿದೆ. ಆ ಮೂಲಕ ಇತರರಿಗೆ ಮಾಹಿತಿ ಒದಗಿಸುವಂತಾಗಬೇಕು ಎಂದರು.
ಮಹಾತ್ಮಾಗಾಂಧಿ ಪದವಿ ಕಾಲೇಜು ಪ್ರಾಂಶುಪಾಲೆ ಹಾಗೂ ಕೊಡಗು ವಿವಿ ಸೆನೆಟ್ ಸದಸ್ಯೆ ಟಿ.ಎ. ಲಿಖಿತ ಮಾತನಾಡಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ತುರ್ತು ಸೇವೆಗಳ ಬಗ್ಗೆ ಅಗತ್ಯ ಮಾಹಿತಿ ಲಭಿಸುವಂತೆ ಆಯಿತು ಎಂದರು.
ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಪತ್ರಕರ್ತರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳಾದ ಕೆ.ಜೆ. ಶಿವರಾಜ್, ಕುಡೆಕಲ್ ಗಣೇಶ್, ಹೆಚ್.ವಿ. ವಿನೋದ್, ಜಯ ಪ್ರಕಾಶ್, ಕುಡೆಕಲ್ ಗಣೇಶ್, ಕೆ.ಕೆ. ನಾಗರಾಜ ಶೆಟ್ಟಿ, ಸಬಲಂ ಭೋಜಣ್ಣ ರೆಡ್ಡಿ, ಕನ್ನಡ ಉಪನ್ಯಾಸಕ ಕೆ.ಆರ್. ಮಂಜೇಶ್, ಶಿಕ್ಷಣ ಸಂಸ್ಥೆಯ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಇದ್ದರು.
ನಂತರ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಬೆಂಕಿ ಅವಘಡಗಳು ಹಾಗೂ ನಂದಿಸುವ ಕುರಿತ ಪ್ರಾತ್ಯಕ್ಷಿಕೆ ನಡೆಯಿತು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಮತ್ತು ಸಿಬ್ಬಂದಿ ತಂಡ ತುರ್ತು ಕಾರ್ಯಾಚರಣೆ ಕುರಿತ ವಿವಿಧ ರೀತಿಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net