ಕುಶಾಲನಗರ ಪುರಸಭೆ ಕಚೇರಿಯಲ್ಲಿ ಮೀನು ಮಾರಾಟ

ಮೀನು ಮಾರಾಟಗಾರರನ್ನು ಎತ್ತಂಗಡಿಗೊಳಿಸಿರುವುದಕ್ಕೆ ಸಂಬAಧಿಸಿದAತೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಮೀನು ಮಾರಾಟಗಾರರನ್ನು ಎತ್ತಂಗಡಿಗೊಳಿಸಿರುವುದಕ್ಕೆ ಸಂಬAಧಿಸಿದAತೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.
Published on
ಕುಶಾಲನಗರ:
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಪ್ರತಿಷ್ಠೆಯಿಂದಾಗಿ ಕುಶಾಲನಗರ ಪುರಸಭೆ ಮಂಗಳವಾರ ಕೆಲವು ಸಮಯಗಳ ಕಾಲ ಮೀನು ಮಾರುಕಟ್ಟೆಯಾಗಿ ಪರಿವರ್ತನೆ ಆಗಿತ್ತು. ಇಲ್ಲಿನ ಅರಣ್ಯ ಇಲಾಖೆ ಕಚೇರಿ ಮುಂಭಾಗ ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದವರನ್ನು ಏಕಾಏಕಿ ಎತ್ತಂಗಡಿ ಮಾಡಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೀನು ಮಾರಾಟಗಾರರೊಂದಿಗೆ ಪುರಸಭೆ ಕಚೇರಿ ಒಳಗಡೆ ಬಂದು ಇಲ್ಲಿಯೇ ಮೀನು ಮಾರಾಟ ಮಾಡುವ ಮೂಲಕ ಪುರಸಭೆ ನಡೆಗೆ ಖಂಡನೆ ವ್ಯಕ್ತಪಡಿಸಿದರು.
ನದಿಗಳಲ್ಲಿ ಮೀನು ಹಿಡಿದು ಮಾರಾಟ ಮಾಡುವ ಬೆಸ್ತ ಜನಾಂಗದ ಅಲೆಮಾರಿಗಳು ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿ ಬಳಿಯೇ ಮೀನು ವ್ಯಾಪಾರ ಮಾಡುತ್ತಿದ್ದರು. ಆದರೆ ರಸ್ತೆಗೆ ಸಮಸ್ಯೆ ಆಗುತ್ತಿದೆ ಎನ್ನುವ ಕಾರಣ ನೀಡಿ ಪುರಸಭೆ ಅಧಿಕಾರಿಗಳು ದಿಢೀರನೇ ಮೀನು ಮಾರಾಟಗಾರರನ್ನು ಅಲ್ಲಿಂದ ತೆರವು ಮಾಡಿದ್ದರು. ಅದೇ ರಸ್ತೆಯಲ್ಲಿ ಹಲವು ಅಂಗಡಿಗಳು ಇದ್ದು ಕೇವಲ ಒಂದು ಅಂಗಡಿಯನ್ನು ಮಾತ್ರ ಗುರುತು ಮಾಡಿ ತೆರವು ಮಾಡಿರುವುದು ಖಂಡನೀಯ ಎಂದು ಬಿಜೆಪಿ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಬದಿಯಲ್ಲಿ ಹೊಟ್ಟೆಪಾಡಿಗಾಗಿ ದುಡಿಯು ಜನಗಳಿಗೆ ಕಿರುಕುಳ ನೀಡುತ್ತಿರುವುದನ್ನು ಪುರಸಭೆಯ ಅಧಿಕಾರಿಗಳು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಈ ಕಾರಣದಿಂದ ಅಲ್ಲಿಂದ ತೆರವು ಮಾಡಿಸಲಾಗಿದೆ. ಇದನ್ನು ಬಿಜೆಪಿ ವಿರೋಧಿಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿದರು.
ಶಾಸಕರ ಜತೆ ಮಾತನಾಡಿ ಮೀನು ಮಾರಾಟಗಾರರಿಗೆ ಬೇರೆ ಕಡೆ ಜಾಗದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ಪ್ರಮುಖರು ಭರವಸೆ ನೀಡಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೀನು ಮಾರಾಟಗಾರರನ್ನು ಹೊರಗೆ ಕಳುಹಿಸಿದ ನಂತರ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ಬಿಜೆಪಿಯಿಂದ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಚರಣ್, ಮಾಜಿ ಸದಸ್ಯ ಮಧುಸೂದನ್, ಪ್ರಮುಖರಾದ ಎಂ.ಡಿ ಕೃಷ್ಣಪ್ಪ, ಭಾಸ್ಕರ್ ನಾಯಕ್, ಪ್ರಶಾಂತ್, ಸುಮನ್ ಇತರರು ಪ್ರತಿಭಟನೆಯಲ್ಲಿ ಇದ್ದರು. ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಪಂಚಾಯತಿ ಮಾಜಿ ಸದಸ್ಯರಾದ ಶಿವಶಂಕರ್, ಪ್ರಕಾಶ್, ಪ್ರಮುಖರಾದ ಕಿರಣ್,ರೋಷನ್, ಆನಂದ್ ಇತರರು ಕಾಂಗ್ರೆಸ್ ಪರವಾಗಿ ಹಾಜರಾಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net