ಫಾತಿಮ ಕಾನ್ವೆಂಟ್‌ನಲ್ಲಿ ಜಾನಪದ ನೃತ್ಯ ಸ್ಪರ್ಧೆ

ಕುಶಾಲನಗರ ಫಾತಿಮಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನ ಸೆಳೆದ ಶಾಲೆಯ ತಂಡ
ಕುಶಾಲನಗರ ಫಾತಿಮಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನ ಸೆಳೆದ ಶಾಲೆಯ ತಂಡ
Published on
ಕುಶಾಲನಗರ:
ಕುಶಾಲನಗರ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಅಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ಫಾತಿಮಾ ಕಾನ್ವೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಸ್ಪರ್ಧೆಯ ಸಂಬAಧ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ 46 ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕವಾಗಿ ಶಾಲಾ ಆಡಳಿತ ಮಂಡಳಿ ಶ್ರಮಿಸುತ್ತಿದೆ ಎಂದರು.
ಇದೇ ಸಂದರ್ಭ ಮಾತನಾಡಿದ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ಆಗ್ನೆಸ್ ಜನಪದ ಮನರಂಜನೆಗೆ ಸೀಮಿತವಾಗದೆ ಪಾರಂಪರಿಕ ಶ್ರೀಮಂತ ಕಲೆಯಾಗಿದೆ. ಅದನ್ನು ಮುಂದಿನ ಪೀಳಿಗೆಗೆ ಪರಿಚಯ ಮಾಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯವೇ ಹೊರತು ಗೆಲುವು ಮುಖ್ಯವಲ್ಲ. ಜನಪದ ಸೊಗಡನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯ ಮಾಡುವಂತಾಗಬೇಕು ಎಂದು ಹೇಳಿದರು.
ಸಂಸ್ಥೆಯ ವತಿಯಿಂದ ಬಿಇಓ ಎಂ. ಕೃಷ್ಣಪ್ಪ, ಸಿಆರ್‌ಪಿ ವಿಶ್ವನಾಥ್ ಮತ್ತು ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳಾದ ಹಿತೇಶ್ ಹಾಗೂ ಹಿರಿಯ ಶಿಕ್ಷಕಿ ಭಾರತಿ ದೇವಯ್ಯ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಜನಪದ ಸ್ಪರ್ಧೆಗಳು ಮೂರು ಹಂತಗಳಲ್ಲಿ ನಡೆದು 15 ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ತಂಡ ಪಾಲ್ಗೊಂಡು ಜಾನಪದ ನೃತ್ಯ ಪ್ರದರ್ಶನ ನೀಡಿದವು. ಇದೇ ಸಂದರ್ಭ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ವೆಬ್ಸೈಟ್ ಅನ್ನು ಬಿಇಓ ಎಂ. ಕೃಷ್ಣಪ್ಪ ಮತ್ತು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮೂಲಕ ಲೋಕಾರ್ಪಣೆ ಮಾಡಲಾಯಿತು.
ಶಿಕ್ಷಣ ಸಂಸ್ಥೆಯ ಪ್ರಮುಖರಾದ ಸಿಸ್ಟರ್ ಅರ್ಪಿತ, ಸಿಸ್ಟರ್ ಫ್ಲೋರೆಟ್, ಸಿಸ್ಟರ್ ಸೋಫಿಯಾ, ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಶಿಕ್ಷಕಿಯರಾದ ಲಿಜೆಟ್, ಲೂಸಿ, ಡೇಸೀ ಹಾಗೂ ತೀರ್ಪುಗಾರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net