ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು

 ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್. ಕೃಷ್ಣ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಜತೆ ಕಾರ್ಯಾಗಾರ ನಡೆಯಿತು. ಎಸ್.ಜೆ. ಸೋಮಶೇಖರ್, ಸದಸ್ಯರಾದ ಸುಮಂತ್ ರಾವ್, ವಿಜಯಲಕ್ಷ್ಮಿ, ರೋಹಿಣಿ ಪ್ರಿಯ, ಲಿಂಗರಾಜು ಕೋಟೆ ಇದ್ದರು.
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್. ಕೃಷ್ಣ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಜತೆ ಕಾರ್ಯಾಗಾರ ನಡೆಯಿತು. ಎಸ್.ಜೆ. ಸೋಮಶೇಖರ್, ಸದಸ್ಯರಾದ ಸುಮಂತ್ ರಾವ್, ವಿಜಯಲಕ್ಷ್ಮಿ, ರೋಹಿಣಿ ಪ್ರಿಯ, ಲಿಂಗರಾಜು ಕೋಟೆ ಇದ್ದರು.
Published on
ಮಡಿಕೇರಿ:
ಆಹಾರ ಭದ್ರತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್. ಕೃಷ್ಣ ನಿರ್ದೇಶನ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಜತೆ ಬುಧವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.
ಆಹಾರ ಇಲಾಖೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ದುರುಪಯೋಗ ಆಗದಂತೆ ತಡೆಯಬೇಕು. ಮಧ್ಯಾಹ್ನದ ಉಪಹಾರ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸಬೇಕು. ಪೂರಕ ಪೌಷ್ಠಿಕ ಆಹಾರ ವಿತರಿಸಬೇಕು. ಜಿಲ್ಲೆಯ ಹಾಡಿಗಳಲ್ಲಿರುವ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಬೇಕು. ಅಪೌಷ್ಠಿಕತೆ ಉಂಟಾಗದAತೆ ಗಮನ ಹರಿಸುವುದು ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯ ಆಗಿದೆ. ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಪಡಿತರ ವಿತರಿಸುತ್ತಿದೆ. ಇವುಗಳ ಸಮರ್ಪಕ ಬಳಕೆ ಆಗಬೇಕು. ದುರ್ಬಲ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸುವುದು ಅತೀ ಮುಖ್ಯವಾಗಿದೆ. ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳು, ಅಂಗನವಾಡಿ ಸೇರಿದಂತೆ ಎಲ್ಲೆಡೆ ಪೌಷ್ಠಿಕ ಆಹಾರ ಪೂರೈಕೆ ಆಗಬೇಕು. ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಿಸಬೇಕು. ಶಾಲಾ ಹಾಜರಾತಿ ವಹಿ ನಿರ್ವಹಣೆ ಸರಿಯಾಗಿ ಇರಬೇಕು. ಪೋಷಕರ ಸಭೆ ನಡೆಸಬೇಕು, ಚಲನವಲನ ವಹಿ ಸಮರ್ಪಕ ನಿರ್ವಹಣೆ ಮಾಡಬೇಕು. ಜೊತೆಗೆ ದಾಸ್ತಾನು ವಹಿ ಕ್ರಮಬದ್ಧವಾಗಿರಬೇಕು. ವಿದ್ಯಾರ್ಥಿಗಳಿಗೆ ಐಚ್ಛಿಕ ವಿಷಯಗಳು ಸೇರಿದಂತೆ ಅಧ್ಯಯನ ವಿಷಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ಮಾರ್ಗದರ್ಶನ ಮಾಡಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಅಡುಗೆ ಕೋಣೆ ಮತ್ತು ಶೌಚಾಲಯ ಸ್ವಚ್ಛವಾಗಿಡಬೇಕು. ಸರಿಯಾದ ಸಮಯಕ್ಕೆ ಮಕ್ಕಳಿಗೆ ಆಹಾರ ನೀಡಬೇಕು. ಶಾಲಾ ಆವರಣದಲ್ಲಿ ಶುಚಿತ್ವಕ್ಕೆ ಗಮನ ಹರಿಸಬೇಕು ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಅಂಗನವಾಡಿ, ಶಾಲೆಗಳು, ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಗ್ರಂಥಾಲಯದಲ್ಲಿ ಅಗತ್ಯ ಪುಸ್ತಕಗಳು ಇರಬೇಕು. ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಇರಬೇಕು ಎಂದು ಸಲಹೆ ಮಾಡಿದರು.
ಸಮಿತಿ ಸದಸ್ಯ ಮಾರುತಿ ಮಾತನಾಡಿ, ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೂರ್ಗ್ಹನಿ ಹೆಸರಿನಲ್ಲಿ ನಕಲಿ ಜೇನುತುಪ್ಪ ಮಾರಾಟ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಪರಿಶೀಲಿಸಬೇಕು. ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಇನ್ನಷ್ಟು ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಬೇಕು. ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಸಮಿತಿ ಸದಸ್ಯರಾದ ಸುಮಂತ್ ರಾವ್, ವಿಜಯಲಕ್ಷ್ಮಿ, ರೋಹಿಣಿ ಪ್ರಿಯ, ಲಿಂಗರಾಜು ಕೋಟೆ ಆಹಾರ ಸುರಕ್ಷತೆ, ವಿದ್ಯಾರ್ಥಿಗಳಿಗೆ ಕಲಿಕಾ ಗುಣಮಟ್ಟ ಹೆಚ್ಚಳ, ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ವಿಚಾರದ ಬಗ್ಗೆ ಸಲಹೆ ಸೂಚನೆ ನೀಡಿದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಆಹಾರ ಸುರಕ್ಷತೆ ಅಂಕಿತಾಧಿಕಾರಿ ಅನಿಲ್ ಧಾವನ್, ಆರ್‌ಸಿಹೆಚ್ ಅಧಿಕಾರಿ ಡಾ.ಮಧುಸೂದನ್, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಡಾ.ಸೋಮಶೇಖರ್, ಆಹಾರ ಇಲಾಖೆಯ ಉಪ ನಿರ್ದೇಶಕ ಎಂ. ಭೀಮರಾಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್. ಹೊನ್ನೆಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ಎಚ್.ಆರ್.ರಮೇಶ್ ಇದ್ದರು.
ವಿಕಲಚೇತನ ಅಧಿಕಾರಿ ವಿಮಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಾಂಕಿತ ಅಧಿಕಾರಿ ಪಿ.ಟಿ. ಕವಿತಾ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಡಾ.ದಿವಾಕರ ಇತರರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net