ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕಾಗಿ ತೆರಳುವ ರಸ್ತೆಯ ಪಾದಚಾರಿ ಮಾರ್ಗ ಕುಸಿದಿದೆ. ಇದು ನಗರದ ಅತ್ಯಂತ ಜನನಿಭಿಡ ರಸ್ತೆಗಳಲ್ಲಿ ಒಂದಾಗಿದ್ದು, ಪಾದಚಾರಿ ಮಾರ್ಗದಿಂದ ರಸ್ತೆಯೂ ಕುಸಿತಕ್ಕೆ ಒಳಗಾಗುವ ಆತಂಕ ಎದುರಾಗಿದೆ. ಹಾಗಾಗಿ ಮುನ್ನೆಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಈ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಸೇರಿದಂತೆ ಇತರ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.