ಹಿರಿಯ ಅನುಭವಿ ಮಾರ್ಗದರ್ಶಕರು ಮತ್ತು ನುರಿತ ಕಾನೂನು ಸಲಹೆಗಾರರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ತಹಸೀಲ್ದಾರ್, ಅರಣ್ಯ ಇಲಾಖೆ, ಕೊಡಗು ಜಿಲ್ಲಾಧಿಕಾರಿ. ಎಫ್‌ಎಸ್‌ಒ ರೇಣುಕಾಂಬ, ರಾಜ್ಯ ಅರಣ್ಯ ಸಂರಕ್ಷಣಾಧಿಕಾರಿ ದೀಕ್ಷಿತ್, ಕಂದಾಯ ಇಲಾಖೆ ಆಯುಕ್ತರು ರಾಜೇಂದ್ರ ಕುಮಾರ್ ಕಟಾರಿಯ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಹಲವು ಬಾರಿ ಸಭೆ ನಡೆಸಿ, ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೊಡಗಿನಲ್ಲಿ ರೈತರು ಸಾಗುವಳಿ ಮಾಡಿಕೊಂಡಿರುವ ಜಮೀನಿನ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡು ಹುಡುಕುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲಾಗಿತ್ತು ಎಂದು ಹೇಳಿದರು.