ಸೋಮವಾರಪೇಟೆ ಸಮೀಪದ ನೇರುಗಳಲೆ ಅಬ್ಬೂರುಕಟ್ಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಾನಿಗಳಾದ ಕುಶಾಲನಗರದ ಇಂಜಿನಿಯರ್ ಸೈಜನ್ ಕೆ.ಪೀಟರ್ ಉಚಿತ ನೋಟ್ ಬುಕ್ ವಿತರಿಸಿದರು. ರಾಜೇಶ್ವರಿ, ಪಾಪೇಗೌಡ, ರತ್ನಕುಮಾರ್ ಇದ್ದರು.
ಸೋಮವಾರಪೇಟೆ: ಸಮೀಪದ ನೇರುಗಳಲೆ ಅಬ್ಬೂರುಕಟ್ಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಾಜ ಸೇವಕರು ಹಾಗೂ ದಾನಿಗಳಾದ ಕುಶಾಲನಗರದ ಇಂಜಿನಿಯರ್ ಸೈಜನ್ ಕೆ.ಪೀಟರ್ ಅವರು ಉಚಿತ ನೋಟ್ ಬುಕ್‌ಗಳನ್ನು ವಿತರಿಸಿದರು.
ಸೋಮವಾರದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬೆಳೆಯಬೇಕು. ಶಿಕ್ಷಣ ಬದುಕಿಗೆ ಸಂಸ್ಕಾರ ಹಾಗೂ ಉತ್ತಮ ಭವಿಷ್ಯವನ್ನು ನೀಡುತ್ತದೆ. ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರೌಢಶಾಲಾ ಸ್ಥಾಪನಾ ಸಮಿತಿ ಅಧ್ಯಕ್ಷ ಪಾಪೇಗೌಡ ಮಾತನಾಡಿ, ಸರ್ಕಾರಿ ಪ್ರೌಢಶಾಲೆ ನೇರುಗಳಲೆ ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದೆ. ಈ ಸಾಲಿನಲ್ಲಿಯೂ ವಿದ್ಯಾರ್ಥಿಗಳು ಹೆಚ್ಚಿನ ಶ್ರಮವಹಿಸಿ ಶೇ.100 ಫಲಿತಾಂಶ ಸಾಧಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕಿ ರಾಜೇಶ್ವರಿ, ಸೋಮವಾರಪೇಟೆ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಶಿಕ್ಷಕರಾದ ಉಮೇಶ್, ರತೀಶ್, ತೇಜಾಕ್ಷಿ, ಲಿಖಿತಾ, ಆಶಾ, ಭಾನುಮತಿ ಹಾಗೂ ವಿದ್ಯಾರ್ಥಿಗಳು ಇದ್ದರು.