ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿದರು. ಶರವಣ ಕುಮಾರ್, ಕೃಷ್ಣೇಗೌಡ, ಗುರುಸ್ವಾಮಿ, ಎ.ಗೋಪಾಲಕೃಷ್ಣ ಮತ್ತಿತರರು ಇದ್ದರು.

Published on
ಮಡಿಕೇರಿ:
ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉನ್ನತಿ ಭವನದ ಸಭಾಂಗಣದಲ್ಲಿ ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ ಸಂಬAಧ ಒಂದು ವಾರಗಳ ಕಾಲ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಗುಣಾತ್ಮಕ ಆಡಳಿತ ನಿರ್ವಹಣೆ ಅಗತ್ಯ. ಆ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಕಾರ ವ್ಯವಸ್ಥೆಯಲ್ಲಿ ಕಲಿಕೆ ನಿರಂತರವಾಗಿದ್ದು, ಸಾಲದ ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳು ಕಾಲ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಆದ್ದರಿಂದ ಸಹಕಾರ ಕಾಯ್ದೆ ಮತ್ತು ತಿದ್ದುಪಡಿ ಬಗ್ಗೆ ಮನನ ಮಾಡಿಕೊಳ್ಳಬೇಕು. ಸಹಕಾರ ಕಾಯ್ದೆಗಳು, ಕಾನೂನುಗಳನ್ನು ತಿಳಿದುಕೊಂಡಲ್ಲಿ ಸಹಕಾರ ಸಂಘಗಳನ್ನು ಇನ್ನಷ್ಟು ಉತ್ತಮ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರಿಯಾಗಲಿದೆ. ಇದರಿಂದ ಕೃಷಿಕರಿಗೆ ಸಹಕಾರ ಸಂಘದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಅನುಕೂಲವಾಗಲಿದೆ. ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲೆಯ 74 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಒಳಗೊಂಡAತೆ 518 ಜನ ನಿರ್ದೇಶಕರು ಪಾಲ್ಗೊಂಡಿರುವುದು ವಿಶೇಷವಾಗಿದೆ.
ಕೊಡಗು ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರಂತರ ಪ್ರಯತ್ನದಿಂದ ಸಹಕಾರ ಸಂಘಗಳಲ್ಲಿ ಷೇರಿನ ಮೊತ್ತವನ್ನು ಹೆಚ್ಚಿಸುವಲ್ಲಿ ಬೈಲಾ ತಿದ್ದುಪಡಿ ಮಾಡಲಾಗಿದೆ. ಇದು ಸಹಕಾರ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಕುಶಾಲನಗರ ವೃತ್ತಿನಿರತರು ಮತ್ತು ಕೈಗಾರಿಕೋದ್ಯಮಿಗಳ ಸಹಕಾರ ಬ್ಯಾಂಕ್ ಅಧ್ಯಕ್ಷ ಶರವಣ ಕುಮಾರ್ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದ್ದು, ಸದೃಢವಾಗಿದೆ. ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಹೊಸ ಹೊಸ ಕಲ್ಪನೆಗಳು ಆಧುನಿಕತೆಗೆ ಹೊಂದಿಕೊAಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೃಷ್ಣೇಗೌಡ ಮಾತನಾಡಿ ಸಹಕಾರ ಸಂಘಗಳಿಗೆ ಸಂಬAಧಿಸಿದAತೆ ನೂತನವಾಗಿ ಜಾರಿಗೊಳಿಸಲು ಉದ್ದೇಶಿಸಿರುವ ಕಾಯ್ದೆ ಕೃಷಿಕರಿಗೆ ಮರಣ ಶಾಸನವಾಗಿದೆ. ಸಹಕಾರ ಸಂಘಗಳಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳ ಮೇಲೆ ಗದಪ್ರಹಾರ ಮಾಡಬಾರದು. ಸಹಕಾರ ಸಂಘಗಳನ್ನು ಉಳಿಸಬೇಕು ಮತ್ತು ಬೆಳೆಸಬೇಕು. ಇವು ಕೃಷಿಕರಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಅಪೆಕ್ಸ್ ಬ್ಯಾಂಕಿನ ಕೃಷಿ ಸಹಕಾರಿ ಸಿಬ್ಬಂದಿ ತರಬೇತಿ ಸಂಸ್ಥೆಯ ಬೋಧಕ ಗುರುಸ್ವಾಮಿ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯನಿರ್ವಹಣೆಗೆ ಸಂಬAಧಿಸಿದAತೆ ಅನ್ವಯವಾಗುವ ಸಹಕಾರ ಕಾಯ್ದೆ 1959 ಮತ್ತು ನಿಯಮಗಳು 1960 ಹಾಗೂ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಾದ ಇತ್ತೀಚಿನ ಬದಲಾವಣೆಗಳು ವಿಷಯದ ಬಗ್ಗೆ ವಿವರಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನಡೆಸಬಹುದಾದ ವಿವಿಧ ಪ್ರಕಾರದ ಸಭೆಗಳು ಮತ್ತು ಕಾರ್ಯವಿಧಾನ, ಸಾಮಾನ್ಯ ಸಭೆ, ವಿಶೇಷ ಸಾಮಾನ್ಯ ಸಭೆ, ಆಡಳಿತ ಮಂಡಳಿ ಸಭೆ ಮತ್ತಿತರ ವಿಷಯಗಳ ಕುರಿತು ಮಾಹಿತಿ ನೀಡಿದರು.
ಬೋಧಕರಾದ ಆದಪ್ಪ ಅವರು ಉತ್ತಮ ಗುಣಾತ್ಮಕ ಆಡಳಿತ ನಿರ್ವಹಣೆಯ ಸೂತ್ರಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪಾರ ಅಭಿವೃದ್ಧಿಯಲ್ಲಿ ಹಾಗೂ ಬೆಳವಣಿಗೆಯಲ್ಲಿ ನಿರ್ದೇಶಕರ ಪಾತ್ರ ಮತ್ತು ಹೊಣೆಗಾರಿಕೆಗಳು ವಿಷಯದ ಬಗ್ಗೆ ಮಾಹಿತಿ ನೀಡಿದರು.
ಬ್ಯಾಂಕಿನ ವೃತ್ತಿಪರ ನಿರ್ದೇಶಕರು ಹಾಗೂ ಶಾಸನ ಬದ್ಧ ಲೆಕ್ಕಪರಿಶೋಧಕರಾದ ಎ.ಗೋಪಾಲಕೃಷ್ಣ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಶಾಸನ ಬದ್ಧ ಲೆಕ್ಕ ಪರಿಶೋಧನೆಯಲ್ಲಿ ನಿರ್ದೇಶಕರ ಪಾತ್ರ ಹಾಗೂ ಜಿಎಸ್‌ಟಿ, ಟಿಡಿಎಸ್. ಆದಾಯ ತೆರಿಗೆ ಇತ್ಯಾದಿ ವಿಷಯಗಳ ಬಗ್ಗೆ ವಿವರ ನೀಡಿದರು.
ಕಡಂಗ ಸಹಕಾರ ಸಂಘದ ನಿರ್ದೇಶಕ ಕೆ.ಎಂ.ತಮ್ಮಯ್ಯ ಮಾತನಾಡಿ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರ ಕುರಿತು ಗಮನ ಸೆಳೆದರು.
ತರಬೇತಿಯಲ್ಲಿ ಭಾಗವಹಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎಲ್ಲಾ ನಿರ್ದೇಶಕರಿಗೆ ಬ್ಯಾಂಕಿನ ವತಿಯಿಂದ ತರಬೇತಿ ಪ್ರಮಾಣ ಪತ್ರ ನೀಡಲಾಯಿತು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್. ಪೂವಯ್ಯ, ನಿರ್ದೇಶಕರಾದ ಪೂಳಂಡ ಪಿ. ಪೆಮ್ಮಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಡಿ. ರವಿಕುಮಾರ್, ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕಿ ಭೋಜಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net