ನಿಯಮಿತವಾಗಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ

ನಾಪೋಕ್ಲು ಸಮೀಪದ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನಿಮಿಯಾ ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಬುಧವಾರ ಆಯೋಜಿಸಲಾಗಿತ್ತು.
ನಾಪೋಕ್ಲು ಸಮೀಪದ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನಿಮಿಯಾ ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಬುಧವಾರ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಪಾಲಕರಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ
ನಾಪೋಕ್ಲು: ಸಮೀಪದ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನಿಮಿಯ ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಬುಧವಾರ ಆಯೋಜಿಸಲಾಗಿತ್ತು.
ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಮಕ್ಕಳ ರಕ್ತಹೀನತೆ, ಅಪೌಷ್ಟಿಕತೆ ತಪಾಸಣೆ ನಡೆಸಲಾಯಿತು. ಹಿಮೋಗ್ಲೋಬಿನ್ ಕಡಿಮೆ ಇರುವ ಮಕ್ಕಳಿಗೆ ಔಷಧಗಳನ್ನು ವಿತರಿಸಲಾಯಿತು. ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿ, ಸರಿಯಾದ ಸಮಯಕ್ಕೆ ಅನಿಮಿಯ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲಕರಿಗೆ ಸಲಹೆ ನೀಡಿದರು.
ಅಂಗನವಾಡಿ ಕೇಂದ್ರಕ್ಕೆ ಒಳಪಡುವ ಐದು ವರ್ಷದೊಳಗಿನ ಮಕ್ಕಳನ್ನು ಪಾಲಕರು ಕರೆತಂದು ಆರೋಗ್ಯ ತಪಾಸಣೆ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಆರ್‌ಬಿಎಸ್‌ಕೆ ತಂಡದ ವೈದ್ಯಾಧಿಕಾರಿ ಶೈಮಾ, ಶುಶ್ರೂಷಕಿ ಮಮತಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಬೇತು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಆಶಾ ಅಪ್ಪಣ್ಣ, ಸಹಾಯಕಿ ಲೀಲಾವತಿ, ಆಶಾ ಕಾರ್ಯಕರ್ತೆಯರಾದ ಗಾಯತ್ರಿ, ಬಿನಿಷಾ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net