ಅಮ್ಮತಿ ಗ್ರಾಮದ ಕಾರ್ಮಾಡುವಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್ ಅಮ್ಮತ್ತಿ ಅವರು ಅರ್ಜೆಂಟೀನಾ ಫುಟ್ಬಾಲ್ ತಂಡದ ಜೆರ್ಸಿ ನೀಡಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಪಕ್ಷದ ಮುಖಂಡರಾದ ಅಪ್ರೂ ರವೀಂದ್ರ, ನಾಗೇಶ್, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್, ಸಮಾಜಸೇವಕ ಚೊಕಂಡ ಸಂಜು ಸುಬ್ಬಯ್ಯ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹೇಳಿಕೆ
ಸಿದ್ದಾಪುರ: ಗ್ರಾಮೀಣ ಪ್ರದೇಶಗಳ ಫುಟ್ಬಾಲ್ ಪ್ರತಿಭೆಗಳಿಗೆ ಉತ್ತಮ ಅವಕಾಶ ಮತ್ತು ಗುಣಮಟ್ಟದ ಮಾರ್ಗದರ್ಶನ ನೀಡಿದರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಬಹುದು ಎಂದು ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹೇಳಿದರು.
ಮಿಲನ್ಸ್ ಫುಟ್ಬಾಲ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನ ಫಿಫಾ ಫ್ಯಾನ್ಸ್ ಫೀಸ್ಟಾ ಶನಿವಾರ ವಿರಾಜಪೇಟೆ ತಾಲೂಕಿನ ಅಮ್ಮತಿ ಗ್ರಾಮದ ಕಾರ್ಮಾಡುವಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಫುಟ್ಬಾಲ್ ವಿಶ್ವಾದ್ಯಂತ ಅಪಾರ ಜನಪ್ರಿಯತೆ ಪಡೆದಿರುವ ಕ್ರೀಡೆಯಾಗಿದ್ದು, ಅನೇಕ ದೇಶಗಳ ಜನರು ಈ ಆಟವನ್ನು ಪ್ರೀತಿಸುತ್ತಾರೆ. ಕ್ರೀಡಾ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿರುವ ಕೊಡಗಿನಲ್ಲಿ ಸಾಕಷ್ಟು ಪ್ರತಿಭಾವಂತ ಫುಟ್ಬಾಲ್ ಆಟಗಾರರಿದ್ದು, ಅವರನ್ನು ಗುರುತಿಸಿ ಮುನ್ನೆಲೆಗೆ ತರುವ ಜವಾಬ್ದಾರಿ ಕ್ಲಬ್‌ಗಳ ಮೇಲಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಆಟಗಾರರಿಗೆ ಉತ್ತಮ ತರಬೇತಿ ಹಾಗೂ ಕ್ರೀಡಾ ಸೌಲಭ್ಯಗಳನ್ನು ಒದಗಿಸಿದರೆ ಅವರು ಉನ್ನತ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಸಮಾಜದ ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ಪಕ್ಷದ ಮುಖಂಡರಾದ ಅಪ್ರೂ ರವೀಂದ್ರ, ನಾಗೇಶ್, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್, ಸಮಾಜಸೇವಕ ಚೊಕಂಡ ಸಂಜು ಸುಬ್ಬಯ್ಯ ಇತರರು ಇದ್ದರು.