ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ

ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಡಾ.ಮಂತರ್‌ಗೌಡ ಸೂಚನೆ
ಸೋಮವಾರಪೇಟೆ: ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಡಾ.ಮಂತರ್‌ಗೌಡ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಅಯೋಜಿಸಿದ್ದ ಮಳೆಗಾಲ ಮುಂಜಾಗ್ರತೆ ಸಭೆಯಲ್ಲಿ ಮಾತನಾಡಿದರು. ಮಳೆ ಪ್ರವಾಹಕ್ಕೆ ಜನರು ಸಿಲುಕಿಕೊಂಡರೆ ತಕ್ಷಣಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಸಾಂತ್ವನ ಕೇಂದ್ರದಲ್ಲಿ ಸೌಲಭ್ಯಗಳು ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಮಳೆಹಾನಿ ಕುರಿತು ಬಂದ ದೂರುಗಳಿಗೆ ತಕ್ಷಣ ಸ್ಪಂದನೆ ನೀಡಬೇಕು. ವಿಳಂಬದಿಂದ ಜನರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ವಿದ್ಯುತ್, ಕುಡಿಯುವ ನೀರು, ಆರೋಗ್ಯ ಸೌಲಭ್ಯ ನಿರಂತರವಾಗಿ ಜನರಿಗೆ ಲಭಿಸಬೇಕು. ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಅಬ್ದುಲ್ ನಬಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net