ಗೋಣಿಕೊಪ್ಪ ಶಿವಾಜಿ ಯುವ ಸೇನೆ ವತಿಯಿಂದ ಮೂರನೇ ವರ್ಷದ ರಕ್ತದಾನ ಶಿಬಿರವನ್ನು ಗೋಣಿಕೊಪ್ಪ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅಣ್ಣಪ್ಪ, ಪ್ರಮೋದ್ ಗಣಪತಿ, ಡಾ.ಶ್ವೇತಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮಾದಕ ವ್ಯಸನ ತೊರೆದು ರಕ್ತದಾನಕ್ಕೆ ಮುಂದಾಗಿ
ಗೋಣಿಕೊಪ್ಪ: ಗೋಣಿಕೊಪ್ಪ ಶಿವಾಜಿ ಯುವ ಸೇನೆ ವತಿಯಿಂದ ಮೂರನೇ ವರ್ಷದ ರಕ್ತದಾನ ಶಿಬಿರವನ್ನು ಗೋಣಿಕೊಪ್ಪ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಶಿವಾಜಿ ಯುವ ಸೇನೆ ಅಧ್ಯಕ್ಷ ಅಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರಕ್ಕೆ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಪ್ರಮೋದ್ ಗಣಪತಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಪ್ರಮೋದ್ ಗಣಪತಿ, ರಕ್ತದಾನವು ಮಹತ್ವದ ಸಮಾಜಮುಖಿ ಕಾರ್ಯವಾಗಿದ್ದು, ಯುವಕರು ರಕ್ತದಾನದ ಬಗ್ಗೆ ಪ್ರೇರಣೆ ಪಡೆದುಕೊಳ್ಳಬೇಕು. ಮಾದಕ ವಸ್ತು ಹಾಗೂ ಮದ್ಯಪಾನ ವ್ಯಸನಗಳಿಂದ ದೂರವಿದ್ದು, ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಬದುಕು ನಡೆಸಬೇಕು. ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ರಕ್ತದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೋಮಿಯೋಪತಿ ವೈದ್ಯೆ ಡಾ.ಶ್ವೇತಾ ಮಾತನಾಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನದ ಬಗ್ಗೆ ಇರುವ ಆತಂಕವನ್ನು ಬದಿಗೊತ್ತಿ ಮುಂದೆ ಬರಬೇಕು. ರಕ್ತದಾನದಿಂದ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದರು.
ಮಡಿಕೇರಿ ರಕ್ತನಿಧಿ ಘಟಕದ ಮುಖ್ಯಸ್ಥ ಡಾ.ಕರುಂಬಯ್ಯ ಮಾತನಾಡಿ, ವಿವಿಧ ಸಂಘ-ಸಂಸ್ಥೆಗಳು ಸ್ವಯಂಪ್ರೇರಿತರಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದರೂ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ರಕ್ತದ ಕೊರತೆ ನೀಗಿಸಲು ಇನ್ನಷ್ಟು ಸಂಘ-ಸಂಸ್ಥೆಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಶಿಬಿರದಲ್ಲಿ ಶಿವಾಜಿ ಯುವ ಸೇನೆಯ ಗೌರವ ಅಧ್ಯಕ್ಷ ಕೊಲ್ಲೀರ ಗಯ ಕಾವೇರಪ್ಪ, ಉಪಾಧ್ಯಕ್ಷ ವಿನು ಮಡಿವಾಳ, ಕಾರ್ಯದರ್ಶಿ ಸುರೇಶ್, ಕೋಶಾಧಿಕಾರಿ ಸ್ವಾಮಿ, ಪದಾಧಿಕಾರಿಗಳು, ಸದಸ್ಯರು ಹಾಗೂ ರಕ್ತದಾನಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ೯೧ ಬಾರಿ ರಕ್ತದಾನ ಮಾಡಿರುವ ಅಶ್ರಫ್ ಅವರನ್ನು ಸನ್ಮಾನಿಸಲಾಯಿತು.