ಮನೋಜ್ ಆನಂದ್ (57) ಮೃತರು. ಪತ್ನಿ ಹಾಗೂ ಮಕ್ಕಳೊಂದಿಗೆ ಪ್ರವಾಸದ ನಿಮಿತ್ತ ವಿರಾಜಪೇಟೆ ಸಮೀಪದ ರೆಸಾರ್ಟ್‌ಗೆ ಆಗಮಿಸಿದ್ದರು. ಸೋಮವಾರ ಮಧ್ಯಾಹ್ನ ಈಜುಕೊಳಕ್ಕೆ ಇಳಿದ ವೇಳೆ ಮನೋಜ್ ಆನಂದ್‌ಗೆ ಉಸಿರಾಟದ ತೊಂದರೆಯಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಕುಟುಂಬ ಸದಸ್ಯರು ಹಾಗೂ ರೆಸಾರ್ಟ್ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಸಫಲವಾಗಲಿಲ್ಲ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.