ಶ್ರೀರಾಮ ಟ್ರಸ್ಟ್ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿವೃತ್ತ ಪ್ರಾಂಶುಪಾಲ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಯೋಗಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅಗತ್ಯ. ಯೋಗಾಭ್ಯಾಸದಿಂದ ಮನುಷ್ಯನ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ. ನಿರಂತರ ಯೋಗ ಪ್ರಕ್ರಿಯೆಯಿಂದ ತಾಳ್ಮೆ, ಸಹನೆ, ಸಹಾನುಭೂತಿ, ಪ್ರೀತಿ, ವಾತ್ಸಲ್ಯ ಸಹಜವಾಗಿ ಮೈಗೂಡಿಕೊಳ್ಳುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದರು.