ಸೆಸ್ಟೋಬಾಲ್‌ನಲ್ಲಿ ಉತ್ತಮ ಪ್ರದರ್ಶನ

ಸೆಸ್ಟೋಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಪರ ಉತ್ತಮ ಪ್ರದರ್ಶನ ತೋರಿಸಿದ ನಂದಿನಿ
ಸೆಸ್ಟೋಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಪರ ಉತ್ತಮ ಪ್ರದರ್ಶನ ತೋರಿಸಿದ ನಂದಿನಿ
Published on
ಮಡಿಕೇರಿ:
ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ಇತ್ತೀಚೆಗೆ ನಡೆದ 7ನೇ ವರ್ಷದ ಸೆಸ್ಟೋಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಶಾಲನಗರದ ತರಬೇತುದಾರ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡ ರಾಷ್ಟç್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ ರನ್ನರ್-ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇವರು ನಂಜರಾಯಪ್ಟಣದ ಸಿ.ಎಂ. ವಾಸು ಮತ್ತು ಸಿ.ವಿ. ಪುಷ್ಪಾವತಿ ದಂಪತಿ ಪುತ್ರಿ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net