ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವ ಸ್ಪರ್ಧಿಗಳು ತಮ್ಮ ತಾಲೂಕಿಗೆ ಅನುಗುಣವಾಗಿ ಪಥಸಂಚಲನದಲ್ಲಿ ಭಾಗವಹಿಸಬೇಕು. ಶುಕ್ರವಾರ ಸ್ಪರ್ಧೆಗಳ ಉದ್ಘಾಟನೆ, ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ. ಶನಿವಾರ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಭಾನುವಾರ ಷೆಟಲ್, ಬ್ಯಾಡ್ಮಿಂಟನ್, ಚೆಸ್, ಕೇರಂ, ಟೇಬಲ್ ಟೆನ್ನಿಸ್ ಸೇರಿದಂತೆ ಒಳಾಂಗಣ ಕ್ರೀಡೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.