ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ

ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂಐಡಿ ಯೋಜನೆಯಡಿ ಬಿಡುಗಡೆಯಾದ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ವಿ.ಪಿ.ಶಶಿಧರ್, ಶೇಖರ್, ನಾರಾಯಣ ಇತರರಿದ್ದರು.
ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂಐಡಿ ಯೋಜನೆಯಡಿ ಬಿಡುಗಡೆಯಾದ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ವಿ.ಪಿ.ಶಶಿಧರ್, ಶೇಖರ್, ನಾರಾಯಣ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ. ಮಂತರ್ ಗೌಡ ಹೇಳಿಕೆ
  • 10 ಲಕ್ಷ ರೂ. ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರ: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂಐಡಿ ಯೋಜನೆಯಡಿ ಬಿಡುಗಡೆಯಾದ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಬುಧವಾರ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಹಣ ಬಿಡುಗಡೆಗೊಳಿಸಿದೆ. ಅದರ ಮೂಲಕ ದೇವಾಲಯ ಸೇರಿದಂತೆ ಹಲವು ಅಭಿವೃದ್ಧಿ ಪೂರಕ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ತೂಗು ಸೇತುವೆ ದುರಸ್ತಿ ಕಾರ್ಯದ ಜತೆಗೆ ದೇವಾಲಯದ ನೂತನ ಸಭಾಂಗಣ ನಿರ್ಮಾಣಕ್ಕೆ 20 ಲಕ್ಷ ರೂ. ನೀಡುವ ಭರವಸೆ ನೀಡಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್, ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಮಹದೇವ, ಸಮಾಜ ಸೇವಕ ಹಕ್ಕೆ ಮೋಹನ್, ಹೆಬ್ಬಾಲೆ ಗ್ರಾ.ಪಂ ಮಾಜಿ ಅಧ್ಯಕ್ಷ ಶೇಖರ್, ಜಿ.ಪಂ ಸಹಾಯಕ ಇಂಜಿನಿಯರ್ ನಾರಾಯಣ, ಇಂಜಿನಿಯರ್ ಕೀರ್ತನ್, ಪುರಸಭೆಯ ಮಾಜಿ ಸದಸ್ಯ ಹರೀಶ್, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್.ಕೃಷ್ಣೇಗೌಡ, ತೊರೆನೂರು ನೀರು ಬಳಕೆದಾರ ಸಂಘದ ಅಧ್ಯಕ್ಷ ಟಿ.ಕೆ.ಪಾಂಡುರಂಗ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net