ಮನೆ ಮನೆಗೆ ತಲುಪುತ್ತಿವೆ ಸರ್ಕಾರದ ಯೋಜನೆಗಳು

ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ ರು. ಸಾಬು ವರ್ಗೀಸ್, ವಿ.ಪಿ.ಶಶಿಧರ್, ಎಂ.ಕೆ.ಹಕೀಂ, ಧನಲಕ್ಷ್ಮೀ, ಕೆ.ಎಂ.ಸೈಯದ್ ಬಾವ ಇತರರಿದ್ದರು.
ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದ ರು. ಸಾಬು ವರ್ಗೀಸ್, ವಿ.ಪಿ.ಶಶಿಧರ್, ಎಂ.ಕೆ.ಹಕೀಂ, ಧನಲಕ್ಷ್ಮೀ, ಕೆ.ಎಂ.ಸೈಯದ್ ಬಾವ ಇತರರಿದ್ದರು.
Published on
ಸಿದ್ದಾಪುರ: ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿ ಗ್ರಾಮಾಭಿವೃದ್ಧಿಗೆ ಒತ್ತು ನೀಡಿರುವ ಶಾಸಕ ಮಂತರ್‌ಗೌಡ ಅವರನ್ನು ಸ್ಥಳೀಯರು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಿದರು.
ಬೆಟ್ಟದಕಾಡು, ಕುಂಬಾರಗುಂಡಿ, ಬರಡಿ, 40 ಎಕರೆ ಹಾಗೂ ನೆಲ್ಯಹುದಿಕೇರಿ ಗ್ರಾಮದ ವಿವಿಧ ಭಾಗಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಲಾಯಿತು.
ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಯುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲಾಗುತ್ತಿದೆ. ಜನರು ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಬು ವಾರ್ಗೀಸ್ ಮಾತನಾಡಿ, ಹಲವು ವರ್ಷಗಳಿಂದ ಈ ಭಾಗದಲ್ಲಿ ಪ್ರಮುಖ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯದೆ ಜನರು ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಶಾಸಕ ಮಂತರ್ ಗೌಡ ಅವರ ಪ್ರಯತ್ನದಿಂದ ವಿದ್ಯುತ್, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ, ಕಿರು ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆದಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಂ.ಕೆ. ಹಕೀಂ, ಧನಲಕ್ಷ್ಮೀ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯದ್ ಬಾವ, ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ಸೆಸ್ಕ್ ಅಧಿಕಾರಿ ಮಂಜುನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net