ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ತಾಲೂಕು ಮೇಲ್ವಿಚಾರಕಿ ಸಾವಿತ್ರಮ್ಮ ತಮ್ಮ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯುವ ಸೇವೆ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪಿಡಿಒ ಚಂದ್ರಶೇಖರ್ ಸಭೆಯಲ್ಲಿ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳನ್ನು ಆಲಿಸಿ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆ ಹರಿಸುವ ಭರವಸೆ ನೀಡಿದರು. ನಾವು ಸಂಸ್ಥೆಯ ಕುಮಾರಿ ಮಕ್ಕಳ ಗ್ರಾಮ ಸಭೆಯ ಉದ್ದೇಶದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಾದ ಪೃಥ್ವಿ, ನಮಿತ, ಕೌಶಿಕ್, ದೀಪು, ರಾಹುಲ್ ಗ್ರಾ.ಪಂ.ಯ ಸದಸ್ಯರು, ಗ್ರಾ.ಪಂ.ಸಿಬ್ಬಂದಿ, ವಿವಿಧ ಶಾಲೆಯ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು