ಗೌಡ ಸಮಾಜಗಳ ಒಕ್ಕೂಟದಿಂದ ಸಿಎಂ ಭೇಟಿ

ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜಗಳ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಸಮುದಾಯದ ವಿವಿಧ ಅಹವಾಲು ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು. ಪಿ.ಎಂ.ನರೇಂದ್ರಸ್ವಾಮಿ, ಮಂತರ್‌ಗೌಡ, ಆನಂದ್ ಕರಂದ್ಲಾಜೆ ಇತರರಿದ್ದರು.
ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜಗಳ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಸಮುದಾಯದ ವಿವಿಧ ಅಹವಾಲು ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು. ಪಿ.ಎಂ.ನರೇಂದ್ರಸ್ವಾಮಿ, ಮಂತರ್‌ಗೌಡ, ಆನಂದ್ ಕರಂದ್ಲಾಜೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗೌಡ ಸಮಾಜಗಳ ಒಕ್ಕೂಟದಿಂದ ಸಿಎಂ ಭೇಟಿ

ಮಡಿಕೇರಿ; ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜಗಳ ಮುಖಂಡರು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮುದಾಯದ ವಿವಿಧ ಅಹವಾಲು ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು.

ಗೌಡ ಸಮುದಾಯದ ಅಭ್ಯುದಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿ ಅಗತ್ಯ ಅನುದಾನಕ್ಕಾಗಿ ಮನವಿ ಮಾಡಿದರು.
ಮುಖ್ಯಮಂತ್ರಿಗಳು ಹಾಗೂ ವಿವಿಧ ಖಾತೆ ಸಚಿವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರು, ಕುಶಾಲನಗರ ಸಮಾಜದ ವತಿಯಿಂದ ಸಲ್ಲಿಸಲಾಗಿದ್ದ ರೂ.೩ ಕೋಟಿ ಅನುದಾನದ ಬೇಡಿಕೆಯಲ್ಲಿ ರೂ.೧ ಕೋಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಅರೆಭಾಷೆ ಗೌಡ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದ ಬೇಡಿಕೆಗೂ ಒಲವು ವ್ಯಕ್ತಪಡಿಸಿದ್ದಾರೆ. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ವಿವಿಧ ಸಚಿವರನ್ನು ಭೇಟಿ ಮಾಡಿದ ನಿಯೋಗವು ಸಮುದಾಯದ ಹಲವಾರು ಬೇಡಿಕೆಗಳನ್ನು ಸಲ್ಲಿಸಿತು ಎಂದರು.
ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಶಾಸಕ ಡಾ.ಮಂತರ್‌ಗೌಡ ಹಾಗೂ ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜಗಳ ಮುಖಂಡರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net