

ವರ್ಷದಿಂದ ವರ್ಷಕ್ಕೆ ಬೀಳುವ ಮಳೆಯ ಪ್ರಮಾಣ ಹಾಗೂ ಹಂಚಿಕೆಯಲ್ಲಿ ವ್ಯತ್ಯಾಸವಾಗುತ್ತಿರುವುದಲ್ಲದೆ ಅಂತರ್ಜಲ ಬಳಕೆ ಪ್ರಮಾಣ ಜಾಸ್ತಿಯಾಗುತ್ತಿರುವುದರಿಂದ ಅಂತರ್ಜಲ ಮಟ್ಟದ ಪ್ರಮಾಣ ಇಳಕೆಯಾಗುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದರೂ ಹಿಂಗಾರಿನಲ್ಲಿ ಬಿದ್ದ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಮತ್ತು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಫೆಬ್ರವರಿ 2025ಕ್ಕೆ ಹೋಲಿಸಿದರೆ ಫೆಬ್ರವರಿ 2026ಕ್ಕೆ ಅಂತರ್ಜಲ ಮಟ್ಟ ಕುಸಿತ ಆಗಿದೆ. ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಜಿನುಗು ಕೆರೆ, ಅಣೆಕಟ್ಟು ಪಿಕಪ್, ಬಂದಾರ, ಚೆಕ್ ಡ್ಯಾಂಗಳು ಅಂತರ್ಜಲ ಮಟ್ಟ ಹೆಚ್ಚಳವಾಗಿಸುವಲ್ಲಿ ಸಹಕಾರಿಯಾಗಿವೆ.