ಹೆಬ್ಬಾಲೆ ಶಾಲೆಯಲ್ಲಿ ಜಿಎಸ್‌ಎಸ್ ನೆನಪಿನ ಕಾರ್ಯಕ್ರಮ

ಹೆಬ್ಬಾಲೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕವಿ ಜಿ.ಎಸ್. ಶಿವರುದ್ರಪ್ಪನವರ ನೆನಪುಗಳು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರದೀಪ್, ಮಣಜೂರು ಮೂರ್ತಿ, ಶಿವಾನಂದ, ಸುಬ್ರಮಣಿ, ವೆಂಕಟನಾಯಕ್ ಮತ್ತಿತರರು ಇದ್ದರು.
ಹೆಬ್ಬಾಲೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕವಿ ಜಿ.ಎಸ್. ಶಿವರುದ್ರಪ್ಪನವರ ನೆನಪುಗಳು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರದೀಪ್, ಮಣಜೂರು ಮೂರ್ತಿ, ಶಿವಾನಂದ, ಸುಬ್ರಮಣಿ, ವೆಂಕಟನಾಯಕ್ ಮತ್ತಿತರರು ಇದ್ದರು.
Published on
ಕುಶಾಲನಗರ:
ಕುಶಾಲನಗರ ತಾಲೂಕು ಹೆಬ್ಬಾಲೆ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಲೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕವಿ ಜಿ.ಎಸ್. ಶಿವರುದ್ರಪ್ಪನವರ ನೆನಪುಗಳು ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರದೀಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷÀ ಮಣಜೂರು ಮೂರ್ತಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಜಿಪಿಟಿ ಸಹ ಶಿಕ್ಷಕ ಶಿವಾನಂದ ಶಿವರುದ್ರಪ್ಪನವರ ಬಾಲ್ಯ, ಯೌವನ ಹಾಗೂ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಹೆಬ್ಬಾಲೆ ಘಟಕದ ಪದಾಧಿಕಾರಿ ಸುಬ್ರಮಣಿ, ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ವೆಂಕಟನಾಯಕ್, ನಿವೃತ್ತ ಶಿಕ್ಷಕಿ ಸಿ.ಎಸ್. ಜಾನಕಿ, ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಎಮ್ ವೆಂಕಟೇಶ್, ಶಿಕ್ಷಕಿ ಸಿ.ಎಸ್. ಬಬಿತಾ, ರಮ್ಯಾ, ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ ಇದ್ದರು. ಇದೇ ವೇಳೆ 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net