ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ ೧.೧೨ ಲಕ್ಷ ಕೋಟಿ ರೂ. ಭರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇದುವರೆಗೆ ೬೪೭.೫೯ ಕೋಟಿ ರೂ.ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಮಾಹಿತಿ ನೀಡಿದರು.