ಮೋಜಿನ ತಾಣವಾಗುತ್ತಿರುವ ಜಾತ್ರೆಗಳು

ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಸಮಾರೋಪ ಸಮಾರಂಭದಲ್ಲಿ ಶ್ರೀ ಮಹಾಂತ ಸ್ವಾಮೀಜಿ ಮಾತನಾಡಿದರು. ಶ್ರೀ ರುದ್ರಮುನಿ ಸ್ವಾಮೀಜಿ, ಚೈತ್ರಾ, ವಿನೀತ್, ಸುಧಾ ಈರೇಶ್, ವೀರೇಂದ್ರ ಕುಮಾರ್ ಇದ್ದರು.
ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಸಮಾರೋಪ ಸಮಾರಂಭದಲ್ಲಿ ಶ್ರೀ ಮಹಾಂತ ಸ್ವಾಮೀಜಿ ಮಾತನಾಡಿದರು. ಶ್ರೀ ರುದ್ರಮುನಿ ಸ್ವಾಮೀಜಿ, ಚೈತ್ರಾ, ವಿನೀತ್, ಸುಧಾ ಈರೇಶ್, ವೀರೇಂದ್ರ ಕುಮಾರ್ ಇದ್ದರು.
Published on
ಶನಿವಾರಸಂತೆ: ಗ್ರಾಮೀಣ ಸೊಗಡಿನ ಜಾತ್ರೆಗಳು ಹಿಂದೆ ಸಂಸ್ಕೃತಿಯ ಮಿಲನವಾಗಿದ್ದವು. ಪ್ರಸ್ತುತ ದಿನಗಳಲ್ಲಿ ಮೋಜು, ಮಸ್ತಿ ಮಾಡುವ ಸ್ಥಳವಾಗುತ್ತಿರುವುದು ಕಳವಳಕಾರಿ ವಿಷಯ ಎಂದು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ ವಿಷಾದಿಸಿದರು.
ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಜಯದೇವ ಜಾತ್ರಾ ಕಲಾ ವೇದಿಕೆಯಲ್ಲಿ ಬುಧವಾರ 82ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರುಗಳ ಜಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಜಾತ್ರೋತ್ಸವಗಳು ಸಂಸ್ಕೃತಿ ಕಾಪಾಡಿಕೊಂಡು ಬರುತ್ತಿದ್ದವು. ರೈತರು ಜಾತ್ರೆಗಳನ್ನು ಹಬ್ಬದ ರೀತಿ ಆಚರಿಸುತ್ತಾರೆ. ಇಂತಹ ಜಾತ್ರೆಗಳು ಜನರು, ರೈತರು ಸೇರುವ ಸಾಂಸ್ಕೃತಿಕ ವ್ಯವಸ್ಥೆಯಾಗಿತ್ತು. ಆದರೆ, ಇಂದು ಜಾತ್ರೆಗಳು ಮೋಜಿನ ಸ್ಥಳಗಳಾಗುತ್ತಿವೆ. ಜಾತ್ರೆಗಳಲ್ಲಿ ಎಲ್ಲ ಜಾತಿ, ಜನಾಂಗದವರು ಒಟ್ಟಾಗಿ ಸೇರುತ್ತಿದ್ದರು. ಇಂದು ನಶಿಸುತ್ತಿರುವ ಜಾತ್ರೆಗಳನ್ನು ಉಳಿಸಲು ಇಂದಿನ ಪೀಳಿಗೆ ಪ್ರಯತ್ನಿಸಬೇಕು ಎಂದರು.
ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಮಾತನಾಡಿ, ಎಲ್ಲರೂ ವೈಜ್ಞಾನಿಕವಾಗಿ ಅಭಿವೃದ್ಧಿ ಸಾಧಿಸುತ್ತಿದ್ದು ಆಂತರಿಕವಾಗಿ ಕುಬ್ಜರಾಗುತ್ತಿದ್ದೇವೆ. ಈ ಮೈದಾನದಲ್ಲಿರುವ ಕಟ್ಟಡವನ್ನು ಮೊದಲು ಸರಿಪಡಿಸಬೇಕು. ಜಾತ್ರೆಯಲ್ಲಿ ರಥೋತ್ಸವ ಇದ್ದರೆ ಒಳ್ಳೆಯದು ಎಂದರು.
ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಈರೇಶ್, ಜಾತ್ರಾ ಸಮಿತಿ ಅಧ್ಯಕ್ಷೆ ಚೈತ್ರಾ, ಕಾರ್ಯದರ್ಶಿ ವಿನೀತ್ ಕುಮಾರ್, ದುಂಡಳ್ಳಿ ಗ್ರಾಪಂ ಅಧ್ಯಕ್ಷೆ ಭವಾನಿ ಗುರು, ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್, ಹಂಡ್ಲಿ ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕುಶಾಲಪ್ಪ, ಹಂಡ್ಲಿ ಪಿಡಿಒ ಆಂಜನಾದೇವಿ, ಹಂಡ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ್, ಮಾಜಿ ಅಧ್ಯಕ್ಷ ಲಕ್ಷ್ಮಶೆಟ್ಟಿ, ಸುಮಂತ್, ಸಂದೀಪ್, ಈರಪ್ಪ, ಗ್ರಾಪಂ ಸದಸ್ಯರು, ಜಾತ್ರಾ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net