ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

ನಿವೇಶನ ರಹಿತ ಕುಟುಂಬಗಳಿಗೆ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಹಕ್ಕುಪತ್ರ ವಿತರಿಸಲಾಯಿತು. ಎಸ್.ಜೆ.ಸೋಮಶೇಖರ್, ಶ್ರೀಧರ, ಶೇಖರ್ ಇತರರಿದ್ದರು.
ನಿವೇಶನ ರಹಿತ ಕುಟುಂಬಗಳಿಗೆ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಹಕ್ಕುಪತ್ರ ವಿತರಿಸಲಾಯಿತು. ಎಸ್.ಜೆ.ಸೋಮಶೇಖರ್, ಶ್ರೀಧರ, ಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ
ಮಡಿಕೇರಿ: ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ ೪೭ ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು.
ಹೊದ್ದೂರು ಗ್ರಾಮದ ಪಾಲೆಮಾಡಿನ ೧೪ ಕುಟುಂಬಗಳಿಗೆ ೯೪ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.
ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು, ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು. ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಮುಂದೆ ಬರಲು ಪ್ರಯತ್ನಿಸಬೇಕು ಎಂದು ಶಾಸಕರು ನುಡಿದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಶಾಸಕರ ನಿರಂತರ ಪ್ರಯತ್ನದಿಂದ ನಿವೇಶನ ಹಕ್ಕುಪತ್ರ ದೊರೆತಿದೆ. ಆ ನಿಟ್ಟಿನಲ್ಲಿ ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಹಂಸ, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಗ್ರಾ.ಪಂ ಉಪಾಧ್ಯಕ್ಷೆ ಅನುರಾಧ, ೧೫ ಅಂಶಗಳ ಕಾರ್ಯಕ್ರಮದ ಸದಸ್ಯರಾದ ಹನೀಫ್, ಗ್ರಾ.ಪಂ.ಪಿಡಿಒ ವತ್ಸಲ, ಅಬ್ದುಲ್ಲಾ, ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಕುಮಾರ್ ಪಾಟೀಲ್, ಪ್ರಮುಖರಾದ ತೆನ್ನಿರಾ ಮೈನಾ, ಮೋಹನ್, ಅಫ್ರು ರವೀಂದ್ರ, ರಫೀಕ್, ಚೌರೀರ ಅನಿತಾ, ಹಮೀದ್, ಕುಸುಮಾವತಿ, ಲಕ್ಷ್ಮಿ, ಕಡ್ಲೇರ ಟೈನಿ, ಮೊಯಿದು, ಕೆ.ಆರ್.ಅನಿತಾ, ಗ್ರಾ.ಪಂ.ಸದಸ್ಯ ಪಾಲೆಮಾಡು ಪೊಣ್ಣಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net