ಏ.6ರಂದು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಸುಗ್ಗಿ ಪ್ರಯುಕ್ತ ಬಂದೂಕುಗಳಿಗೆ ಪೂಜೆ ನೆರವೇರಿಸಲಾಯಿತು.
ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಸುಗ್ಗಿ ಪ್ರಯುಕ್ತ ಬಂದೂಕುಗಳಿಗೆ ಪೂಜೆ ನೆರವೇರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಬಂದೂಕುಗಳಿಗೆ ವಿಶೇಷ ಪೂಜೆ
ಸೋಮವಾರಪೇಟೆ: ಉತ್ತರ ಕೊಡಗಿನ ಸಾಂಪ್ರದಾಯಿಕ ಆಚರಣೆಯಲ್ಲಿ ಒಂದಾಗಿರುವ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಏ.6ರಂದು ನಗರಳ್ಳಿಯ ಕಂಬತ್ತಳೆ ಬನದಲ್ಲಿ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಸುಗ್ಗಿ ಆಚರಣೆಯ ಪ್ರಾರಂಭದ ದಿನವಾದ ಭಾನುವಾರ ದೇವಿಯ ತವರೂರು ಎಂದೇ ಕರೆಸಿಕೊಳ್ಳುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದಲ್ಲಿನ ಬಂದೂಕುಗಳಿಗೆ ಗ್ರಾಮದ ಪ್ರಧಾನ ಅರ್ಚಕ ಅನಂತ ರಾಮ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಂತರ ಗ್ರಾಮಸ್ಥರು ದೇವರ ಕಟ್ಟೆಗೆ ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಿದರು.
ಕೂತಿ ಗ್ರಾಮಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ.ಜಯರಾಮ್, ಉಪಾಧ್ಯಕ್ಷ ಕೆ.ಡಿ.ಗಿರೀಶ್, ಕಾರ್ಯದರ್ಶಿ ಯಾದವ್ ಕುಮಾರ್, ಖಜಾಂಚಿ ಲಕ್ಷ್ಮಯ್ಯ, ಶ್ರೀ ಸಬ್ಬಮ್ಮ ದೇವಿ ಸಮಿತಿ ಮಾಜಿ ಅಧ್ಯಕ್ಷ ಕೆ.ಟಿ.ಜೋಯಪ್ಪ, ಪ್ರಮುಖರಾದ ಅಶ್ವತ್ಥ್, ಬೋಪ್ಪಯ್ಯ, ಭರತ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net