ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

05ಏಓ1  ಹೆಬ್ಬಾಲೆಯ ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕುಶಾಲನಗರದ ಖಾಸಗಿ ಆಸ್ಪತ್ರೆ ಸೈರಸ್ ನ ಮಕ್ಕಳ ತಜ್ಞರಾದ ಡಾ.ಜಗತ್ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಂಸ್ಥೆಯ ವ್ಯವಸ್ಥಾಪಕ ಎಚ್ .ಎಸ್. ಲೋಕೇಶ್ , ಶಾಲೆ ಸಿಬ್ಬಂದಿ ಹಾಜರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಖಾಸಗಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಜಗತ್ ಇವರ ಸಹಯೋಗದಲ್ಲಿ
ಕುಶಾಲನಗರ: ಹೆಬ್ಬಾಲೆಯ ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕುಶಾಲನಗರದ ಖಾಸಗಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಜಗತ್ ಇವರ ಸಹಯೋಗದಲ್ಲಿ, ಮೂರು ದಿನಗಳ ಕಾಲ ಎಲ್‌ಕೆಜಿಯಿಂದ 7ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಸಂಸ್ಥೆಯ ವ್ಯವಸ್ಥಾಪಕ ಎಚ್. ಎಸ್.ಲೋಕೇಶ್ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಕಾರಣಕರ್ತರಾಗಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡ ಮಕ್ಕಳು ಹಾಗೂ ಪಾಲಕರು ಮತ್ತು ಇದರಲ್ಲಿ ಸೇವೆ ಸಲ್ಲಿಸಿದ ವೈದ್ಯರಿಗೆ ಸಂಸ್ಥೆ ವತಿಯಿಂದ ಗೌರವ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net