ನಕ್ಸಲ್ ನಿಗ್ರಹ ಪಡೆಯಿಂದ ಆರೋಗ್ಯ ಸೇವೆ

ನಕ್ಸಲ್ ನಿಗ್ರಹ ಪಡೆ ವತಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಬುಡಕಟ್ಟು ಜನಾಂಗದವರಿಗೆ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದಲ್ಲಿ ವಿವಿಧ ಆರೋಗ್ಯ  ಸಂಸ್ಥೆಯ ಸಿಬ್ಬಂದಿಗಳು.
ನಕ್ಸಲ್ ನಿಗ್ರಹ ಪಡೆ ವತಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ಬುಡಕಟ್ಟು ಜನಾಂಗದವರಿಗೆ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದಲ್ಲಿ ವಿವಿಧ ಆರೋಗ್ಯ ಸಂಸ್ಥೆಯ ಸಿಬ್ಬಂದಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ಬುಡಕಟ್ಟು ಜನಾಂಗಕ್ಕೆ ಉಚಿತ ತಪಾಸಣೆ ಶಿಬಿರ
ವಿರಾಜಪೇಟೆ: ತಾಲೂಕಿನ ಆರ್ಜಿ ಗ್ರಾಮದಲ್ಲಿನ ವಾಲ್ಮೀಕಿ ಭವನದಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೊಡಗು ಎಸ್‌ಪಿ ಬಿಂದು ಮಣಿ, ಆರೋಗ್ಯದ ಪ್ರಾಮುಖ್ಯತೆಯಿಂದ ನಕ್ಸಲ್ ಪೀಡಿತ ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಅವರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದೆ ಎಂದರು.
ಕೆ.ಅಮರನಾಥ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಎ.ಬಿ ಶೆಟ್ಟಿ ಡೆಂಟಲ್ ಕಾಲೇಜಿನ ಅಸೋಸಿಯೇಟ್ ಡೀನ್ ಡಾ.ಅಮರಶ್ರೀ ಅಮರನಾಥ್ ಶೆಟ್ಟಿ ಮಾತನಾಡಿ, ಶಿಬಿರದಲ್ಲಿ ಯಾವ ಯಾವ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂಬುದರ ಮಾಹಿತಿ ನೀಡಿದರು.
ಶಿಬಿರದಲ್ಲಿ ವಿವಿಧ ಆಸ್ಪತ್ರೆಯ ಸುಮಾರು 50 ವೈದ್ಯರ ತಂಡ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ನಿಟ್ಟೆಯ ಎ.ಬಿ.ಶೆಟ್ಟಿ. ಡೆಂಟಲ್ ಕಾಲೇಜಿನ ಡಾ.ಶಿಲ್ಪಾ, ಕೆ.ಎಸ್.ಹೆಗ್ಡೆ, ಡಾ.ಕುಶಾಲ್, ಡಾ.ಗುರುಪ್ರಸಾದ್ ಇತರರು ಇದ್ದರು.
ವಿಶೇಷ ಸಾರಿಗೆ ವ್ಯವಸ್ಥೆ: ಕೊಡಗು ಭಾಗದ ನಕ್ಸಲ್ ಪೀಡಿತ ಪ್ರದೇಶಗಳಾದ ಕಾಡುಕುರುಬ, ಜೇನುಕುರುಬ, ಸೋಲಿಗ, ಎರವ, ಕುಡಿಯಾ ಬುಡಕಟ್ಟು ಜನಾಂಗದ ಒಟ್ಟು 275 ಜನರು ಶಿಬಿರದ ಪ್ರಯೋಜನ ಪಡೆದರು. ವಿಶೇಷವೆಂದರೆ, ದುರ್ಗಮ ಪ್ರದೇಶಗಳಿಂದ ಬರಲು ಸಾಧ್ಯವಾಗದ ಗ್ರಾಮಸ್ಥರನ್ನು ಎಎನ್‌ಎಫ್ ಘಟಕದ ವಾಹನಗಳ ಮೂಲಕವೇ ಅವರ ಗ್ರಾಮಗಳಿಂದ ಕರೆತಂದು, ತಪಾಸಣೆ ಮುಗಿದ ಬಳಿಕ ಮರಳಿ ಅವರ ಮನೆಗೆ ಬಿಡುವ ವ್ಯವಸ್ಥೆಯನ್ನು ನಕ್ಸಲ್ ನಿಗ್ರಹ ಪಡೆ ಮಾಡಿತ್ತು. ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ಎಎನ್‌ಎಫ್ ವತಿಯಿಂದ ಊಟ ಮತ್ತು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net